ಸರ್ಕಾರಿ ಕಾರ್ಯಕ್ರಮದಲ್ಲಿ ಕನ್ಯಾ ಪೂಜೆ ಕಡ್ಡಾಯ ಆದೇಶ ಹೊರಡಿಸಿದೆ ಈ ರಾಜ್ಯ..!
ಮಧ್ಯಪ್ರದೇಶ: ಇತ್ತೆಚೆಗೆ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು, ಹೆಣ್ಣುಮಕ್ಕಳನ್ನ ತಾತ್ಸಾರ ಮಾಡುತ್ತಿರುವ ಪ್ರಸಂಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಇದರಿಂದಾಗಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ರಾತ್ರಿ ಕರ್ಫ್ಯೂ ಐಡಿಯಾ ಕೊಟ್ಟೋರ ಫೋಟೋ ಕೊಡಿ, ಮನೇಲಿ ಇಟ್ಕೋತೇನೆ: ಸಚಿವ ಸುಧಾಕರ್ ಗೆ ಡಿಕೆಶಿ ಡಿಚ್ಚಿ
ಅದೇನೆಂದ್ರೆ ಸರ್ಕಾರಿ ಕಾರ್ಯಕ್ರಮಗಳನ್ನು ಪ್ರಾರಂಭಿಸುವ ಇನ್ಮುಂದೆ ಹೆಣ್ಣನ್ನು ದೇವರ ಸ್ಥಾನದಲ್ಲಿರಿಸಿ ಪೂಜಿಸುವಂತೆ ಸೂಚಿಸಿ ಆದೇಶ ಹೊರಡಿಸಿದೆ. ಹೌದು ಯಾವುದೇ ಸರ್ಕಾರಿ ಕಾರ್ಯಕ್ರಮವನ್ನು ಆರಂಭಿಸುವ ಮುಂಚೆ ಮುಖ್ಯ ಅತಿಥಿಗಳು ಕನ್ಯಾ ಪೂಜೆ ನೆರವೇರಿಸಬೇಕು. ಈ ಕುರಿತಂತೆ ಸಂಬಂಧಪಟ್ಟ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಿದೆ ಎಂದು ಮಧ್ಯಪ್ರದೇಶ ಸರ್ಕಾರ ತಿಳಿಸಿದೆ.
4 ತಿಂಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಹೆಣ್ಣುಮಕ್ಕಳನ್ನು ಪೂಜಿಸುವುದಾಗಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದರು. ಇದೀಗ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ಯಾ ಪೂಜೆ ಸಂಪ್ರದಾಯವನ್ನು ಮುಂದುವರಿಸಬೇಕು ಎಂದು ಆದೇಶ ಹೊರಡಿಸುವ ಮೂಲಕ ತಾವು ಕೊಟ್ಟ ಮಾತಿನಂತೆ ನಡೆದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








