ಹುಬ್ಬಳ್ಳಿ: ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರವ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ರದ್ದು ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ಬಾಭಿಮಾನಿ ಬಣದ ಕಾರ್ಯಕರ್ತರು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿ ಕರವೇ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.
ಇತ್ತೀಚೆಗೆ ವಿಶ್ವದಾದ್ಯಂತ ಕೊರೊನಾ ಮಹಾಮಾರಿ ರೋಗ ರಾಜ್ಯವನ್ನ ದಿವಾಳಿ ದಿಕ್ಕಿನೆಡೆಗೆ ಕೊಂಡೊಯ್ಯುತ್ತಿದ್ದು, ಉತ್ತರ ಕರ್ನಾಟಕವೂ ಮಳೆಯ ಪ್ರವಾಹದಿಂದ ತತ್ತರಿಸಿ ಹೋಗಿದೆ. ಅತಿವೃಷ್ಠಿಯಿಂದ ರೈತರ ಬೆಳೆಗಳು ನಾಶವಾಗಿದ್ದು, ಪ್ರವಾಹ ಪೀಡಿತರಿಗೆ, ರೈತರಿಗೆ ಹಾಗೂ ನಿರಾಶ್ರಿತರಿಗೆ ಸರ್ಕಾರ ನೆರವು ನೀಡಿಲ್ಲ. ಆದರೆ, ಮರಾಠಿಗರ ಬೇಡಿಕೆಗಳನ್ನ ಈಡೇರಿಸಿ ಅಧಿಕಾರದ ದುರಾಸೆಗಾಗಿ ಮರಾಠರ ಓಲೈಕೆಗಾಗಿ ಅವರನ್ನ ಮತ ಬ್ಯಾಂಕ್ ಮಾಡುವ ಷಡ್ಯಂತ್ರಕ್ಕಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವುದು ಸರಿಯಲ್ಲ. ಕೂಡಲೇ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ರದ್ದು ಪಡಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ನಂತರ ಹುಬ್ಬಳ್ಳಿ ತಹಶೀಲ್ದಾರಿಗೆ ಮನವಿ ಸಲ್ಲಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel