ಕಾರ್ಗಿಲ್ ವಿಜಯ್ ದಿವಸ್ – ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಿದ ಪ್ರಧಾನಿ
ಹೊಸದಿಲ್ಲಿ, ಜುಲೈ 26: ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಜಯಗಳಿಸಿದ 21 ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಿದರು. ಅವರ ಶೌರ್ಯವು ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದರು. ಜುಲೈ 26, 1999 ರಂದು ಭಾರತೀಯ ಸೇನೆಯು ಪಾಕಿಸ್ತಾನವನ್ನು ಸೋಲಿಸಿತು. ಅಂದಿನಿಂದ, ಭಾರತೀಯ ಸಶಸ್ತ್ರ ಪಡೆಗಳ ಹೆಮ್ಮೆ ಮತ್ತು ಧೈರ್ಯವನ್ನು ನೆನಪಿಸಿಕೊಳ್ಳುವ ದಿನವನ್ನು ಕಾರ್ಗಿಲ್ ವಿಜಯ್ ದಿವಾಸ್ ಎಂದು ಸ್ಮರಿಸಲಾಗುತ್ತದೆ.

ಕಾರ್ಗಿಲ್ ಯುದ್ಧವನ್ನು ಜುಲೈ 26, 1999 ರಂದು , ಭಾರತೀಯ ಸೈನಿಕರು ಪಾಕಿಸ್ತಾನದ ಸೈನ್ಯವನ್ನು ಸೋಲಿಸಿ ರಾಷ್ಟ್ರವನ್ನು ರಕ್ಷಿಸಿದ್ದರು.
ಸರಣಿ ಟ್ವೀಟ್‌ಗಳಲ್ಲಿ, 1999 ರಲ್ಲಿ ನಮ್ಮ ರಾಷ್ಟ್ರವನ್ನು ಸ್ಥಿರವಾಗಿ ರಕ್ಷಿಸಿದ ನಮ್ಮ ಸಶಸ್ತ್ರ ಪಡೆಗಳ ಧೈರ್ಯ ಮತ್ತು ದೃಢ ನಿಶ್ಚಯವನ್ನು ನಾವು ನೆನಪಿಸಿಕೊಳ್ಳುತ್ತೇವೆ. ಅವರ ಶೌರ್ಯವು ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ, ನಮ್ಮ ಸೈನಿಕರ ಶೌರ್ಯಕ್ಕಾಗಿ ಭಾರತವು ಎಂದೆಂದಿಗೂ ಅವರಿಗೆ ಕೃತಜ್ಞರಾಗಿರಬೇಕು ಎಂದು ಹೇಳಿದರು.
ಕಾರ್ಗಿಲ್ ವಿಜಯ್ ದಿವಾಸ್ ಭಾರತದ ಹೆಮ್ಮೆ, ಶೌರ್ಯ ಮತ್ತು ಅಚಲ ನಾಯಕತ್ವದ ಸಂಕೇತವಾಗಿದೆ ಎಂದು ಹಿಂದಿನ ದಿನ ಗೃಹ ಸಚಿವ ಮತ್ತು ಬಿಜೆಪಿ ಮುಖಂಡ ಅಮಿತ್ ಶಾ ಹೇಳಿದ್ದಾರೆ








