2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ದಾಖಲೆಯ ಮಟ್ಟದಲ್ಲಿ 86% ಫಲಿತಾಂಶ ಬಂದಿದೆ. ಕಳೆದ ವರ್ಷ 73.45% ಇದ್ದ ಫಲಿತಾಂಶಕ್ಕೆ ಹೋಲಿಸಿದರೆ, ಈ ಬಾರಿ 12.50% ಏರಿಕೆ ಕಂಡುಬಂದಿದೆ.
ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ ಸುಮಾರು 6,10,000 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ಸಾಧನೆ ಗಮನಾರ್ಹವಾಗಿ ಹೆಚ್ಚಾಗಿದೆ.
ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು ಎಸ್ಎಮ್ಎಸ್ ಮೂಲಕ ಅವರ ಮೊಬೈಲ್ಗಳಿಗೆ ಕಳುಹಿಸಲಾಗಿದ್ದು, ಸುಲಭವಾಗಿ ಫಲಿತಾಂಶ ತಿಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.
ಈ ವರ್ಷದ ಫಲಿತಾಂಶವು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಿ ಪರಿಗಣಿಸಲಾಗುತ್ತಿದೆ.








