ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

Karnataka Assembly Election: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

ನಿನ್ನೆಯಷ್ಟೇ ಬಿಡುಗಡೆ ಮಾಡಿದ್ದ ಬಿಜೆಪಿ

Author2 by Author2
May 2, 2023
in Politics, ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದ್ದು, ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳಿಂದ ಎಸ್ಸಿ ಸಮುದಾಯಕ್ಕೆ ಶೇ. 15 ರಿಂದ 17ಕ್ಕೆ, ಎಸ್ಟಿ ಸಮುದಾಯಕ್ಕೆ ಶೇ. 3 ರಿಂದ 7ಕ್ಕೆ, ಅಲ್ಪಸಂಖ್ಯಾತರಿಗೆ ಶೇ. 4ರ ಮರು ಸ್ಥಾಪನೆ, ಲಿಂಗಾಯತ, ಒಕ್ಕಲಿಗ ಮತ್ತಿತರ ಸಮುದಾಯಗಳ ಮೀಸಲಾತಿಯನ್ನು ಶೇ. 50ರಿಂದ 75ರ ವರೆಗೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇದರ ಜೊತೆಗೆ ಭಜರಂಗ ದಳವನ್ನು ನಿಷೇಧಿಸುತ್ತೇವೆ ಎಂದು ಕಾಂಗ್ರೆಸ್ (Congress) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ್ ಸೇರಿ ಹಲವರು ಭಾಗಿಯಾಗಿದ್ದರು.

Related posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

October 5, 2026
.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

October 5, 2026

ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ ಭಜರಂಗದಳ ಮತ್ತು ಪಿಎಫ್‍ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.

ಗೃಹಶಕ್ತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು. ಜೊತೆಗೆ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ 3000ರೂ. ಪದವೀಧರರಿಗೆ, 1500 ರೂ, ಡಿಪ್ಲೊಮಾ ಪದವೀಧರರಿಗೆ ನೀಡುತ್ತೇವೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ ಉಚಿತ 10 ಕೆಜಿ ಅಕ್ಕಿ ಹಾಗೂ ಗೃಹಲಕ್ಷ್ಮಿ ಯೋಜನೆಯಡಿ 2,000 ರೂ. ಪ್ರತಿ ಮನೆಯ ಯಜಮಾನಿಗೆ ನೀಡಲಾಗುವುದು. ಜೊತೆಗೆ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ ಪ್ರಯಾಣ ಮಾಡಲಾಗುವುದು.ಬಿಜೆಪಿ ಒಳ ಮೀಸಲಾತಿ ರದ್ದುಗೊಳಿಸಿ, ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ ಮಾಡಲಾಗುತ್ತದೆ. ಎಸ್‍ಸಿ-ಎಸ್‍ಟಿ ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ಧವಾಗಿದೆ.

ಸರ್ಕಾರಿ, ಅನುದಾನಿತ ಶಾಲೆಯಲ್ಲಿ ಓದಿ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ ಆದ ಬಾಲಕಿಯರಿಗೆ ಉಚಿತ ಎಲೆಕ್ಟ್ರಿಕ್ ವಾಹನ ಹಾಗೂ ಬುಡಕಟ್ಟು ಸಮುದಾಯದ 100 ಸಾಧಕರಿಗೆ ತಲಾ ಒಂದು ಲಕ್ಷ ಮೊತ್ತದ ಆದಿವಾಸಿ ಸಿರಿ ಗೌರವ ನೀಡಲಾಗುವುದು. ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ವರ್ಷಕ್ಕೆ 500 ಕೋಟಿ ಅನುದಾನ ನೀಡುತ್ತೇವೆ. ನೇಕಾರರಿಗೆ 10 ಗಂಟೆ ತಡೆ ರಹಿತ ಉಚಿತ ವಿದ್ಯುತ್ ಹಾಗೂ ವಿಧವೆ ಪಿಂಚಣಿ 2500 ಹೆಚ್ಚಳ ಮಾಡಲಾಗುವುದು. ದುಡಿಯುವ ಮಹಿಳೆಯರಿಗಾಗಿ 100 ಹಾಸ್ಟಲ್ ನಿರ್ಮಾಣ ಮಾಡಲಾಗುವುದು. ನಿರ್ಭಯ ವಾಹಿನಿ ಯೋಜನೆ ಮೂಲಕ ಹೈಸ್ಕೂಲ್, ಪಿಯುಸಿ ಬಿಟ್ಟವರಿಗೆ ಉಚಿತ ವಾಹನ ತರಬೇತಿ ಹಾಗೂ ಸಬ್ಸಿಡಿಯಲ್ಲಿ ಆಟೋ, ಮತ್ತು ಕಾರ್ ನೀಡಲಾಗುತ್ತದೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ರದ್ದುಗೊಳಿಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಜೊತೆಗೆ ಪಠ್ಯಪುಸ್ತಕ ಮರಳಿ ಪರಿಷ್ಕರಣೆಗೊಳಿಸಲಾಗುವುದು. ಪಿಯುಸಿಯಿಂದ ಪಿಜಿವರೆಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್, ಡಿಜಿಟಲ್ ನೋಟ್ ಪ್ಯಾಡ್ ಉಚಿತವಾಗಿ ನೀಡಲಾಗುವುದು. ಎರಡು ವರ್ಷಗಳಿಗೊಮ್ಮೆ ಹಿರಿಯ ನಾಗರಿಕರಿಗೆ ರಾಜ್ಯದ 15, ದೇಶದ 10 ಪ್ರವಾಸಿ ತಾಣಗಳಿಗೆ ಉಚಿತ ಯಾತ್ರಾ ಪ್ರವಾಸ ಮಾಡಲಾಗುವುದು. ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ ಮಾಡಲಾಗುವುದು, ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ ನೀಡುತ್ತೇವೆ. ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳಗೊಳಿಸುತ್ತೇವೆ. ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ ಹಾಗೂ ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ ನೀಡಲಾಗುವುದು.

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ನಿವೃತ್ತಿ ಸೈನಿಕ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ವಾರ್ಷಿಕ 250 ಕೋಟಿ ಅನುದಾನ ನೀಡಲಾಗುವುದು. ಸ್ವ ಉದ್ಯೋಗಕ್ಕಾಗಿ ಶೇ 5% ಬಡ್ಡಿಯಲ್ಲಿ 10 ಲಕ್ಷದವರೆಗೆ ಸಾಲ ಹಗೂ ಪತ್ರಕರ್ತರ ಕಲ್ಯಾಣ ನಿಧಿ ಸ್ಥಾಪನೆ 500 ಕೋಟಿ ಅನುದಾನ ನೀಡುತ್ತೇವೆ.
ವಕೀಲರ ಸಂರಕ್ಷಣಾ ಕಾಯ್ದೆ ಅಕ್ಷರಶಃ ಜಾರಿ ಹಾಗೂ ಅನಿವಾಸಿ ಕನ್ನಡಿಗರ ವ್ಯವಹಾರಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಲಾಗುವುದು. ಅನಿವಾಸಿ ಕನ್ನಡಗರು ರಾಜ್ಯದಲ್ಲಿ ಉದ್ಯಮ ನಡೆಸಲು 1 ಸಾವಿರ ಕೋಟಿ ಅವರ್ತನ ನಿಧಿ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಭರವಸೆ ನೀಡಿದೆ.

 

Tags: Karnataka Assembly Election: Congress party manifesto released
ShareTweetSendShare
Join us on:

Related Posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

.ನಾನು ಸೆಲ್ಫ್ ಮೇಡ್ ಮ್ಯಾನ್ ನಿಮ್ಮ ಜೊತೆ ಹೇಗೆ ಫೈಟ್ ಮಾಡಬೇಕೆಂದು ಗೊತ್ತು ಎಂದು ಡಾ ಎಂ ಸಿ ಸುಧಾಕರ್ ಬಣಕ್ಕೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
October 5, 2026
0

ಚಿಕ್ಕಬಳ್ಳಾಪುರ: ಜಿಲ್ಲಾ ಕಾಂಗ್ರೆಸ್ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಆಂತರಿಕ ಭಿನ್ನಮತ ಈಗ ಅಗ್ನಿಪರ್ವತವಾಗಿ ಸ್ಫೋಟಗೊಂಡಿದೆ. ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ...

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್ ಹಾವಳಿ ಹಿಂದೂಗಳು ಯಾವತ್ತೂ ಕಾನೂನು ಮೀರುವುದಿಲ್ಲ : ರಾಜ್ಯ ಬಿಜೆಪಿಯಲ್ಲಿಲ್ಲ ಮತ ಸೆಳೆಯುವ ನಾಯಕರು,2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್ ಹಾವಳಿ ಹಿಂದೂಗಳು ಯಾವತ್ತೂ ಕಾನೂನು ಮೀರುವುದಿಲ್ಲ : ರಾಜ್ಯ ಬಿಜೆಪಿಯಲ್ಲಿಲ್ಲ ಮತ ಸೆಳೆಯುವ ನಾಯಕರು,2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

by Shwetha
October 5, 2026
0

ದಾವಣಗೆರೆ: ವಿಜಯಪುರದ ಶಾಸಕ ಮತ್ತು ಹಿಂದೂ ಹುಲಿ ಖ್ಯಾತಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಅತ್ಯಂತ...

ಯುಪಿ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಟಿಕೆಟ್ ಬದಲಾವಣೆ ಸಾಧ್ಯತೆ: 100 ಶಾಸಕರಿಗೆ ಕೊಕ್?

ಯುಪಿ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಟಿಕೆಟ್ ಬದಲಾವಣೆ ಸಾಧ್ಯತೆ: 100 ಶಾಸಕರಿಗೆ ಕೊಕ್?

by Shwetha
October 4, 2026
0

ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ತನ್ನ ಹಾಲಿ ಶಾಸಕರ ಕಾರ್ಯಕ್ಷಮತೆ ಮತ್ತು ಕ್ಷೇತ್ರಮಟ್ಟದ ಜನಬೆಂಬಲದ ಕುರಿತು ಆಂತರಿಕ ಮೌಲ್ಯಮಾಪನ ನಡೆಸುತ್ತಿದೆ. ಈ...

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ  ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

by Shwetha
October 4, 2026
0

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಮತ್ತು ರೈತರ ಸರಣಿ ಸಂಕಷ್ಟಗಳ ನಡುವೆ ಈಗ ರಾಜಕೀಯ ವಾಗ್ದಾಳಿ ತಾರಕಕ್ಕೇರಿದೆ. ಅನ್ನದಾತನ ಅಳಲು ಆಲಿಸಬೇಕಾದ ಬಿಜೆಪಿ ನಾಯಕರು ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram