ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ (Congress) ಅಧಿಕೃತವಾಗಿ ಸೇರಿದ್ದಾರೆ.
ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅವರನ್ನು ಸ್ವಾಗತಿಸಿದ್ದಾರೆ. ಮಧು ಬಂಗಾರಪ್ಪ ಸೇರಿದಂತೆ ಹಲವರು ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತ್ತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
‘ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೇಳಿಕೊಡೋದು ಬೇಡ. ಅವರಿಗೆ ಜನ ಸೇವೆ ಗೊತ್ತು ಎಂದಿದ್ದಾರೆ.