ಬೆಂಗಳೂರು: ರಾಜ್ಯದಲ್ಲಿ ಒಂದೇ ಹಂತದಲ್ಲಿ ಇಂದು ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು ಮತದಾನಕ್ಕೆ (Karnataka Election) ಬೆಂಗಳೂರಿನಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆ.
ನಗರದಲ್ಲಿ ಬೆಂಗಳೂರಿನಲ್ಲಿ (Bengaluru) ಬೆಳಗ್ಗೆ ಜನರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಪ್ರತಿ ಚುನಾವಣೆಯಲ್ಲಿಯೂ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಕಡಿಮೆ ದಾಖಲಾಗುತ್ತದೆ. ಈ ನಿಟ್ಟಿನಲ್ಲಿ ಈ ಬಾರಿ ರಾಜಕೀಯ ಪಕ್ಷಗಳು, ಚುನಾವಣಾ ಆಯೋಗ (Election Commission) ಮತ ಪ್ರಮಾಣ ಹೆಚ್ಚಿಸಲು ಕಸರತ್ತು ನಡೆಸುತ್ತಿವೆ.
ಬೆಳಗ್ಗೆ 7ಕ್ಕೆ ಜನರು ಸರದಿ ನಿಂತು ಮತದಾನ ಮಾಡುತ್ತಿದ್ದಾರೆ. 2018ರ ಚುನಾವಣೆ ಮೇ 12 ಶನಿವಾರ ನಡೆದಿತ್ತು. ವೀಕೆಂಡ್ ಆದ ಹಿನ್ನೆಲೆಯಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದಿತ್ತು. ಆದರೆ ಈ ಬಾರಿ ಬುಧವಾರ ನಡೆಯುತ್ತಿರುವ ಕಾರಣ ಹೆಚ್ಚಿನ ಪ್ರಮಾಣದ ಮತದಾನವಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ನಂತರ ಮಳೆ ಬರುವ ಸಾಧ್ಯತೆ ರುವ ಹಿನ್ನೆಲೆಯಲ್ಲಿ ಬೆಳಿಗ್ಗೆಯೇ ಹಲವೆಡೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸುತ್ತಿದ್ದಾರೆ.
ಮತಗಟ್ಟೆಯ ಒಳಗಡೆ ಮೊಬೈಲ್ (Mobile) ತೆಗೆದುಕೊಂಡು ಹೋಗುವುದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಕೆಲವೊಂದು ಕಡೆ ಪೊಲೀಸರೇ ಸ್ವಿಚ್ ಆಫ್ ಮಾಡಿ ತೆಗೆದುಕೊಂಡು ಹೋಗಲು ಅನುಮತಿ ನೀಡಿದ್ದಾರೆ.








