ಧಾರವಾಡ : ಹನುಮನ ಭಕ್ತರಾದ ಭಜರಂಗದಳ (Bajarangdal) ದ ತಂಟೆಗೆ ಹೋದರೆ, ನೀವು ಬೇರು ಸಮೇತ ಕಿತ್ತು ಹೋಗುತ್ತೀರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಾಂಗ್ರೆಸ್ ಕಿಡಿಕಾರಿದ್ದಾರೆ.
ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ (Shankar Patil Munenakoppa) ಪರ ರೋಡ್ ಶೋ ನಡೆಸಿ ಮಾತನಾಡಿದ ಅವರು, ಈ ನಾಡಿಗೆ ಭಾಗದಲ್ಲಿ ಮಹದಾಯಿ ನೀರು ಬಂದಿರಲಿಲ್ಲ, ರೈತರ ಮೇಲೆ ಗುಂಡು ಹಾಕಿದರು. ಮಹದಾಯಿ (Mayadayi) ನೀರನ್ನು ಮಲಪ್ರಭೆಗೆ ತರಲು ಕಾಂಗ್ರೆಸ್ ಅಡ್ಡವಾಯಿತು. ಸೋನಿಯಾ ಗಾಂಧಿ ಅವರು ಗೋವಾ (Goa) ದಲ್ಲಿ ಹೇಳಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.
ಮನಮೋಹನ್ ಸಿಂಗ್ (Manamohan Singh) ಅವರು ನಮಗೆ ನೀರು ಕೊಡಲು ಟ್ರಿಬುನಲ್ ಮಾಡಿದ್ರು, ಸಿದ್ದರಾಮಯ್ಯ ಸರ್ಕಾರ ಗೋಡೆ ಕಟ್ಟಿದ್ರು, ಒಂದು ಕೋಟಿ ಖರ್ಚು ಮಾಡಿ ನಾವು ಕೆನಲ್ ಕಟ್ಟಿದೆವು, ಗೋಡೆ ಕಟ್ಟಿದೆವು ಎಂದ ಸಿಎಂ, ಇದೇ ನವಲಗುಂದ ತಾಲೂಕಿನಲ್ಲಿ ಹೆಣ್ಣು ಮಕ್ಕಳ ಮೇಲೆ ಲಾಠಿ ಹೊಡೆದವರಿಗೆ ಮತ ಹಾಕ್ತಿರಾ ಎಂದು ಪ್ರಶ್ನೆ ಮಾಡಿದರು. ಕಾಂಗ್ರೆಸ್ ನವರು ಮೋದಿ (Narendra Modi) ಅವರ ಅಕ್ಕಿ ಕೊಡುತ್ತಾರೆ. ಎಲ್ಲ ಗ್ಯಾರಂಟಿ ಮೇ 10ರ ವರೆಗೆ, ಅದರ ನಂತರ ಗಳಗಂಟಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಜರಂಗದಳ ಬ್ಯಾನ್ ಮಾಡುತ್ತೇವೆ ಅಂತಾರೆ, ಭಯೋತ್ಪಾದನೆ ಮಾಡಿದ ಪಿಎಫ್‍ಐಗೆ ಅವರು ಕೇಸ್ ವಾಪಸ್ ಪಡೆದರು, ಬಜರಂಗದಳದವರು ನಮ್ಮ ಹನುಮನ ಭಕ್ತರು, ಒಬ್ಬೊಬ್ಬರು ಸಿಡಿದು ನಿಂತರೆ ಬೇರು ಸಮೇತ ಕಿತ್ತು ಹೋಗ್ತೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.








