ಬೆಂಗಳೂರು: ರಾಜ್ಯದಲ್ಲಿ ಮೇ 10ರಂದು ಸಾರ್ವತ್ರಿಕ ಚುನಾವಣೆ ಜರಗುವ ಹಿನ್ನೆಲೆಯಲ್ಲಿ ಮೇ 9 ಹಾಗೂ 10ರಂದು ಸರ್ಕಾರಿ ಬಸ್ ಗಳನ್ನು ಹೆಚ್ಚಾಗಿ ಸೇವೆಯಲ್ಲಿರುತ್ತವೆ. ಹೀಗಾಗಿ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಬಸ್ ಗಳನ್ನು ನಂಬಿಕೊಂಡು ಅಂದು ಮನೆಯಿಂದ ಹೊರಗೆ ಬರಬೇಡಿ. ರಾಜ್ಯದಲ್ಲಿ ಎರಡು ದಿನ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಗಳು ಸಿಗುವುದಿಲ್ಲ. ಈ ಎರಡೂ ದಿನಗಳ ಕಾಲ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಚುನಾವಣಾ ಕಾರ್ಯಕ್ಕೆ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳನ್ನೇ ಹೆಚ್ಚಾಗಿ ನಿಯೋಜನೆ ಮಾಡಲಾಗಿದೆ. ಹೀಗಾಗಿ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಚುನಾವಣಾ ಕಾರ್ಯಕ್ಕೆ ಒಟ್ಟು 3700 ಬಸ್ ಗಳು ಚುನಾವಣೆ ಕಾರ್ಯಕ್ಕೆ ಮೀಸಲಿಡಲಾಗಿದೆ. ಅಲ್ಲದೇ, 2 ಸಾವಿರಕ್ಕೂ ಅಧಿಕ ಬಿಎಂಟಿಸಿ ಬಸ್ ಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆ ಸಿಬ್ಬಂದಿ ಕೆಲಸಕ್ಕೆ, ಮತಗಟ್ಟೆ ಕೇಂದ್ರಗಳಿಗೆ ಬೇಕಾದ ವಸ್ತುಗಳನ್ನು ಸಾಗಿಸಲು ಬಸ್ ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.








