ಬೆಳಗಾವಿ : ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಹೀಗಾಗಿ ಎಲ್ಲ ನಾಯಕರು ಮತದಾರರ ಬಳಿ ಹೋಗಿ ವೋಟ್ ಕೇಳುತ್ತಿದ್ದಾರೆ. ಎಲ್ಲ ಪಕ್ಷಗಳು ಸೆಲೆಬ್ರಿಟಿಗಳನ್ನು ಕರೆಯಿಸಿ ಪ್ರಚಾರ ನಡೆಸುತ್ತಿದ್ದಾರೆ. ಈಗಾಗಲೇ ಸುದೀಪ್ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದರೆ, ಶಿವಣ್ಣ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.
ಶಿವರಾಜಕುಮಾರ್ (Shivarajkumar) ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಪರ ಮೇ 6ರಂದು ಪ್ರಚಾರ ನಡೆಸಲಿದ್ದಾರೆ. ಬೆಳಗಾವಿಗೆ (Belagavi)ಗೆ ತೆರಳಲಿರುವ ಶಿವಣ್ಣ ಗ್ರಾಮೀಣ ಕ್ಷೇತ್ರಕ್ಕೆ ತೆರಳಿ ಲಕ್ಷ್ಮಿ ಹೆಬ್ಬಾಳ್ಕರ್ ಪರ ಪ್ರಚಾರ ನಡೆಸಲಿದ್ದಾರೆ.
ಮತ್ತೆ ಸಂಜೆ 4ಕ್ಕೆ ಬೆಳಗಾವಿ ತಾಲೂಕಿನ ಸುಳೇಬಾವಿಗೆ ಆಗಮಿಸಿ, ಶ್ರೀ ಮಹಾಲಕ್ಷ್ಮೀ ದೇವಿ ದರ್ಶನ ಪಡೆದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಲಿದ್ದಾರೆ. ಚುನಾವಣಾ ಪ್ರಚಾರ (Election Campaign) ಕಾರ್ಯ ಆರಂಭಿಸಲಿದ್ದಾರೆ.
ಸಂಜೆ 5 ಗಂಟೆಗೆ ಶಿಂದೊಳ್ಳಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 7 ಗಂಟೆಗೆ ಹೊನ್ನಿಹಾಳ ಗ್ರಾಮದಲ್ಲಿ ರಸ್ತೆ ಶೋ ನಡೆಸಿ ಮತ ಯಾಚಿಸಲಿದ್ದಾರೆ.








