ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಆರೋಗ್ಯ ಸಿಬ್ಬಂದಿಯನ್ನು ಕೂಡ ನಿಯೋಜಿಸಿರುವ ಹಿನ್ನೆಲೆಯಲ್ಲಿ ನಾಳೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸಾ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಕೆಲವು ಆಸ್ಪತ್ರೆಗಳು ಒಳರೋಗಿ ದಾಖಲಾತಿ ಸ್ಥಗಿತಗೊಳಿಸಿದ್ದು, ಲ್ಯಾಬ್, ಎಕ್ಸ್ರೇ ಸೇರಿದಂತೆ ಕೆಲವು ಸೇವೆಗಳನ್ನು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಆದರೆ, ಬಹುತೇಕ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಾಳೆ ಬೆಳಿಗ್ಗೆ 7ರಿಂದ ಮತದಾನ ಆರಂಭವಾಗಲಿದ್ದು, ಸಾರಿಗೆ, ವೈದ್ಯಕೀಯ ಸೇರಿದಂತೆ ಹಲವು ಸೇವೆಗಳಲ್ಲಿ ವ್ಯತ್ಯಯ ಉಂಟಾಗಬಹುದು. ರಾಜ್ಯ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರ ತಮ್ಮ ಹಕ್ಕು ಚಲಾಯಿಸಬೇಕು ಎಂದು ಸಾಕ್ಷಾ ಟಿವಿ ಮನವಿ ಮಾಡುತ್ತಿದೆ.








