ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections)ಗೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿಯೂ ಉತ್ತಮವಾಗಿ ಮತದಾನ ನಡೆಯುತ್ತಿದೆ. ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ (Sudha Murthy) ದಂಪತಿ ಸರತಿಯಲ್ಲಿ ನಿಂತು ಸಾಮಾನ್ಯ ವ್ಯಕ್ತಿಗಳಂತೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರಿನ (Bengaluru) ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ (Narayana Murthy) ದಂಪತಿ ಹಕ್ಕು ಚಲಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸುಧಾಮೂರ್ತಿ ಅವರು, ತಮ್ಮೊಂದಿಗೆ ಸರತಿಯಲ್ಲಿ ನಿಂತಿದ್ದ ಜನರೊಂದಿಗೆ ಹಲವು ಹೊತ್ತು ಮಾತನಾಡಿದರು. ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿ ತೆಗೆದುಕೊಳ್ಳಲು ಹಲವರು ಮುಗಿ ಬಿದ್ದಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶಭಕ್ತಿ ಇಲ್ಲದವರು ಮಾತ್ರ ಮತದಾನ ಮಾಡುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಬದಲಾವಣೆ ಬರಬೇಕಾದರೆ, ಪ್ರತಿಯೊಬ್ಬರೂ ತಮ್ಮ ಹಕ್ಕು ಚಲಾಯಿಸಬೇಕು. ನಮ್ಮನ್ನು ನೋಡಿ ಯುವಜನರು ಕಲಿಯಬೇಕು. ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಮನವಿ ಮಾಡಿದರು.








