ಬೆಳಗಾವಿ: ಬಿಜೆಪಿಯು(BJP) ದೇಶದಲ್ಲಿಯೇ ಕರ್ನಾಟಕವನ್ನು ನಂ.1 ರಾಜ್ಯ ಮಾಡಲು ಯೋಜನೆ ರೂಪಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಬಹುಮತ ಗಳಿಸಲಿದೆ. ಎಲ್ಲರಲ್ಲಿಯೂ ಬಿಜೆಪಿಯ ಕುರಿತು ಉತ್ಸಾಹ ಕಂಡು ಬರುತ್ತಿದೆ. ಹೀಗಾಗಿಯೇ ಪ್ರತಿಯೊಬ್ಬರೂ ಬಹುಮತದ ಬಿಜೆಪಿ ಸರ್ಕಾರ ರಚಿಸಲು ಮುಂದಾಗಿದದಾರೆ. ಡಬಲ್ ಇಂಜಿನ್ ಸರ್ಕಾರ ಪುನರಾಯ್ಕೆಯ ಶಂಖನಾದ ಜನರಿಂದ ಕೇಳಿ ಬಂದಿದೆ. ಇದಕ್ಕೆಲ್ಲ ಕಾರಣ ಬಡವರ, ಮಧ್ಯಮವರ್ಗದ ವಿಶ್ವಾಸ ಗಳಿಸಿದ್ದು ಎಲ್ಲರ ವಿಶ್ವಾಸ ಗಳಿಸಿದ್ದೆ ಇದಕ್ಕೆಲ್ಲ ಕಾರಣ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್, ಜೆಡಿಎಸ್‌ನ ಶಾರ್ಟ್ ಕಟ್ ಸರ್ಕಾರದ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಸಮಾಜ ವಿಭಜಿಸಲು ಅವರು ಈ ರೀತಿಯ ರಾಜಕಾರಣ ಮಾಡುತ್ತಿರುತ್ತಾರೆ. ಈ ರೀತಿಯ ನೀತಿ ವಿಕಾಸದ ಹಾದಿಗೆ ಕರೆದೊಯ್ಯುವುದಿಲ್ಲ. ಶಾರ್ಟ್ ಕಟ್ ರಾಜಕಾರಣದಿಂದ ಅಭಿವೃದ್ಧಿ ಆಗುವುದಿಲ್ಲ. ಹಿಂದೆಲ್ಲ ಅವರು ಮಾಡಿರಬಹುದು. ಆದರೆ, ಇದು 3ನೇ ಪೀಳಿಗೆಯ ಸಮಾಜ ಇದೆ. ಈ ಯುವ ಪೀಳಿಗೆ ಶಾರ್ಟ್ ಕಟ್ ನವರ ಕೈಗೆ ಅಧಿಕಾರ ಕೊಡುವುದಿಲ್ಲ. ದೇಶದಲ್ಲಿ ಅಸಮಾನತೆ ಹೋಗಲಾಡಿಸಿದ್ದು ಬಿಜೆಪಿ ಸರ್ಕಾರ ಎಂದು ಹೇಳಿದ್ದಾರೆ.
ಕಾಂಗ್ರೆಸ್ ರಿಮೋಟ್ ಇರುವುದು ದೆಹಲಿಯ ಒಂದು ಕುಟುಂಬದ ಮನೆಯಲ್ಲಿ. ಜೆಡಿಎಸ್ ಒಂದು ಪರಿವಾರದ ಪ್ರೈವೆಟ್ ಲಿಮಿಟೆಡ್ ಕಂಪನಿ. ಆದರೆ ಮೋದಿಗೆ ಈ ಕುಟುಂಬ ರಾಜಕಾರಣ ಗೊತ್ತಿಲ್ಲ. ಜನರೇ ನನ್ನ ಪರಿವಾರ, ನನ್ನ ಕುಟುಂಬ. ಜನರ ಸುಖ-ದುಃಖಗಳೇ ನನಗೆ ನನ್ನ ಕುಟುಂಬದ ಸುಖ-ದುಃಖಗಳಿದ್ದಂತೆ ಎಂದು ಭಾವುಕರಾಗಿ ಮಾತನಾಡಿದರು.