ಮಾರ್ಚ್ 27ರಂದು ಕರ್ನಾಟಕ ಬಂದ್
ಬೆಂಗಳೂರು : ಬೆಲೆ ಏರಿಕೆ ವಿರೋಧಿಸಿ ಹಾಗೂ ತಮಿಳುನಾಡು ಕೈಗೆತ್ತಿಕೊಂಡಿರುವ ಕಾವೇರಿ ನೀರಾವರಿ ಯೋಜನೆಗಳನ್ನು ಕೈ ಬಿಡುವಂತೆ ಒತ್ತಾಯಿಸಿ ಮಾರ್ಚ್ 27 ರಂದು ಕರ್ನಾಟಕ ಬಂದ್ ನಡೆಸಲು ಕನ್ನಡ ಒಕ್ಕೂಟ ಮುಂದಾಗಿದೆ. ಬೆಲೆ ಏರಿಕೆ ಮತ್ತು ತಮಿಳುನಾಡು ಕಾವೇರಿ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಯಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ತಮಿಳುನಾಡಿನ ಕಾವೇರಿ ನದಿ ಜೋಡಣೆಯಿಂದಾಗಿ ಕರ್ನಾಟಕಕ್ಕೆ ಭಾರಿ ನಷ್ಟವಾಗುತ್ತದೆ. ಹೀಗಾಗಿ ಕರ್ನಾಟಕ ಸರ್ಕಾರ ಪ್ರಧಾನಿ ಅವರನ್ನು ಭೇಟಿ ಮಾಡಿ ಕಾಮಗಾರಿಗೆ ತಡೆ ತರಬೇಕು ಎಂದು ಮನವಿ ಮಾಡಿಕೊಂಡರು.
ತಮಿಳುನಾಡಿ ಕಾವೇರಿ ನೀರಾವರಿ ಯೋಜನೆ ವಿರೋಧಿಸಿ ಮಾರ್ಚ್ 13ರಂದು ಕನ್ನಡ ಒಕ್ಕೂಟದ ವತಿಯಿಂದ ಕೆಆರ್‍ಎಸ್ ಚಲೋ ನಡೆಸುತ್ತೇವೆ. ವಿಧಾನಸೌಧದ ಬಳಿಯೂ ಕೂಡ ಪ್ರತಿಭಟನೆ ನಡೆಸುತ್ತೇವೆ.
ಮಾರ್ಚ್ 20ರಂದು ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ ವಾಟಾಳ್ ನಾಗರಾಜ್, ಇಷ್ಟಾದ್ರೂ ಸರ್ಕಾರ ಒಂದು ನಿರ್ಧಾರಕ್ಕೆ ಬರದಿದ್ದರೇ ಮಾರ್ಚ್ 27ರಂದು ಕರ್ನಾಟಕ ಬಂದ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
