ರಾಜ್ಯದಲ್ಲಿ ಸೆಪ್ಟೆಂಬರ್ 5-6 ರಂದು ಭಾರೀ ಮಳೆಯಾಗುವ ಮುನ್ಸೂಚನೆ..! ಯೆಲ್ಲೋ ಅಲರ್ಟ್..!
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಹಲವು ಕಡೆಗಳಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಂತೂ ಮೋಡ ಕವಿದ ವಾತಾವರಣವೇ ಇದೆ.. ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ, ಮಲೆನಾಡು ಹಾಗೂ ಕಲ್ಯಾಣ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಈ ನಡುವೆ ಸೆ. 5 ಮತ್ತು 6ರಂದು ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಅಲ್ಲದೇ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 25 ರಂದು ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಎಡಪಕ್ಷಗಳ ಬೆಂಬಲ..!
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ವಿಜಯಪುರದಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಂಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸೆ. 5ರಂದು ಮಳೆಯಾಗಲಿದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಸೆ.6 ರಂದು ಕರಾವಳಿ ಮತ್ತು ಮಲೆನಾಡಿನ ಎಲ್ಲಾ ಜಿಲ್ಲೆಗಳು ಮತ್ತು ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಿ ಮಳೆಯಾಗುವ ಸಾಧ್ಯೆಯಿದೆ. ಹೀಗಾಗಿ ಈ ಎಲ್ಲಾ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.