ಕಚ್ಚಾಟ ಇಲ್ಲ.. ಸರ್ಕಾರದ ಶ್ವಾಸಕೋಶ ಗಟ್ಟಿಯಾಗಿದೆ : ಪ್ರಹ್ಲಾದ್ ಜೋಶಿ
ಧಾರವಾಡ : ರಾಜ್ಯ ಸರ್ಕಾರದ ಶ್ವಾಸಕೋಶ ಸರಿಯಾಗಿದೆ. ಸಹಜವಾಗಿ ಉಸಿರಾಡುತ್ತಿದೆ. ತುಂಬಾನೆ ಗಟ್ಟಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕುರಿತು ಪ್ರಶ್ನೆಗೆ ಉತ್ತರಿಸಿ, ಸರ್ಕಾರದ ಶ್ವಾಸಕೋಶ ಈಗ ಸರಿಯಾಗಿವೆ, ಸಹಜವಾಗಿ ಉಸಿರಾಡುತ್ತಿದೆ, ಶ್ವಾಸಕೋಶಗಳು ತುಂಬಾನೇ ಗಟ್ಟಿಯಾಗಿವೆ ಹಾಗಾಗಿ ಸರಿಯಾಗಿ ಕೆಲಸ ಮಾಡುತ್ತಿದೆ. ನಮ್ಮ ಪಕ್ಷದಲ್ಲಿ ಯಾವುದೇ ಕಚ್ಚಾಟ ಇಲ್ಲ ಎಂದು ಹೇಳಿದರು.
ಇದೇ ವೇಳೆ ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆ ಎಂಬ ಯೋಗೇಶ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯೋಗೇಶ್ವರ್ ಯಾವ ವಿ.ವಿಯಲ್ಲಿ ಪರೀಕ್ಷೆ ಬರೆದಿದ್ದಾರೋ ಅಲ್ಲೇ ಫಲಿತಾಂಶ ಬರುತ್ತೆ. ಅವರು ಪರೀಕ್ಷೆ ಬರೆದ ವಿವಿಯ ಕುಲಪತಿ ಅರುಣ್ ಸಿಂಗ್ ಅವರು ಈಗಾಗಲೇ ಸರಿಯಾದ ಉತ್ತರ ಕೊಟ್ಟಿದ್ದಾರೆ ಎಂದು ತಿಳಿಸಿದರು.
ಇನ್ನು ಕೇಂದ್ರ ಸಚಿವ ಸಂಪುಟಕ್ಕೆ ಸರ್ಜರಿ ವಿಚಾರವಾಗಿ ಮಾತನಾಡಿ, ಕೇಂದ್ರ ಸಚಿವ ಸಂಪುಟ ಪ್ರಧಾನಿ ತೀರ್ಮಾನದ ಮೇಲೆ ವಿಸ್ತರಣೆ, ಪುನರ್ ರಚನೆ ಆಗುತ್ತದೆ. ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳುತ್ತಾರೆ ಗೊತ್ತಿಲ್ಲ. ಅದರ ಬಗ್ಗೆ ಮೊದಲೇ ನಮ್ಮ ಸರ್ಕಾರದಲ್ಲಿ ಗೊತ್ತಾಗುವುದಿಲ್ಲ. ಹೀಗಾಗಿ ನಾನು ಉತ್ತರಿಸಲು ಅರ್ಹನಲ್ಲ ಎಂದರು.









