Karnataka BJP | ಜುಲೈ 28ಕ್ಕೆ ಸರ್ಕಾರದ ಸಾಧನಾ ಸಮಾವೇಶ
ಬೆಂಗಳೂರು : ಇದೇ ತಿಂಗಳ 28ಕ್ಕೆ ಬಸವರಾಜ ಬೊಮ್ಮಾಯಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ಆಗಲಿದೆ.
ಈ ಹಿನ್ನೆಲೆಯಲ್ಲಿ ಈ ಒಂದು ವರ್ಷದ ಅವಧಿಯಲ್ಲಿ ಜನಪರ ಸ್ವಚ್ಛ ಆಡಳಿತ ನೀಡಿರುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಲಸಿಕಾಕರಣ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರವಹಿಸಿಕೊಂಡು ಇದೇ ತಿಂಗಳ 28ಕ್ಕೆ ಒಂದು ವರ್ಷ ಪೂರೈಸಲಿದ್ದಾರೆ.

ಈ ಒಂದು ವರ್ಷದ ಅವಧಿಯಲ್ಲಿ ಜನಪರ ಸ್ವಚ್ಛ ಆಡಳಿತ ನೀಡಿರುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸಮಾವೇಶ ನಡೆಸಲು ನಿರ್ಧರಿಸಿ ದೊಡ್ಡಬಳ್ಳಾಪುರವನ್ನು ಆಯ್ಕೆ ಮಾಡಲಾಗಿದೆ ಹೊರತು ಅದಕ್ಕೆ ಬೇರೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವನಾಗಿರುವುದರಿಂದ ನನಗೆ ಮತ್ತು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ಸಚಿವರುಗಳಿಗೆ ಸಮಾವೇಶದ ಜವಾಬ್ದಾರಿ ನೀಡಲಾಗಿದೆ.
ನಾವೆಲ್ಲರೂ ಒಟ್ಟಾಗಿ ಆ ಕಾರ್ಯಕ್ರಮ ಯಶಸ್ವಿಗೊಳಿಸಲು ಕೆಲಸ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.