Karnataka | ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸಿಹಿ ನೀಡಿದೆ.
ರಾಜ್ಯ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳು ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ, ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಶೇಕಡಾ 3.75 ರಷ್ಟು ತಟ್ಟಿ ಭತ್ಯೆ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ.
ಜುಲೈ ಒಂದರಿಂದಲೇ ತುಟ್ಟಿಭತ್ಯೆ ಅನ್ವಯವಾಗುವಂತೆ ಸಿಎಂ ಅನುಮೋದಿಸಿದ್ದಾರೆ.
ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂಪಾಯಿ ಭರಿಸಲಿದೆ ಎಂದು ತಿಳಿಸಿದ್ದಾರೆ.