Karnataka | ಹಿಂದೂ ಕಾರ್ಯಕರ್ತರ ಮೇಲಿನ ಕ್ರಿಮಿನಲ್ ಕೇಸ್ ವಾಪಸ್
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಬಿಜೆಪಿ ಮತ್ತು ಹಿಂದು ಕಾರ್ಯಕರ್ತರ ಮೇಲಿನ 35 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ನಿರ್ಧಾರ ಮಾಡಿದೆ ಎಂದು ವರದಿಯಾಗಿದೆ.
ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಸಂಪುಟ ಉಪಸಮಿತಿ ಶಿಫಾರಸ್ಸುಗಳನ್ನು ಆಧರಿಸಿ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು, ರೈತ ಮುಖಂಡರು, ಕನ್ನಡ ಪರ ಕಾರ್ಯಕರ್ತರ ವಿರುದ್ಧದ ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.
ಆದ್ರೆ ಯಾವ ಪ್ರಕರಣಗಳನ್ನು ಹಿಂಪಡೆಯಲಾಗುತ್ತದೆ ಎಂದು ಮಾಹಿತಿ ಲಭ್ಯವಾಗಿಲ್ಲ.
ಇದೇ ಸಂಪುಟ ಸಭೆಯಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಂಪುಟ ನಿರ್ಧಾರಿಸಿದೆ.