ಹಿಂದೂಗಳ ಭಾವನೆಗಳಿಗೆ ಧಕ್ಕೆಯಾದಾಗ ಸಿದ್ದರಾಮಯ್ಯ ಆತ್ಮಸಾಕ್ಷಿ ಎಲ್ಲಿತ್ತು?
ಬೆಂಗಳೂರು : ಹಿಂದೂಗಳ ಭಾವನೆಗಳಿಗೆ ಧಕ್ಕೆಯಾದಾಗ ಸಿದ್ದರಾಮಯ್ಯ ಅವರ ಆತ್ಮಸಾಕ್ಷಿ ಎಲ್ಲಿತ್ತು ಎಂದು ರಾಜ್ಯ ಬಿಜೆಪಿ ಘಟಕ ಪ್ರಶ್ನೆ ಮಾಡಿದೆ.
ಆತ್ಮಸಾಕ್ಷಿ ಎಂಬ ವಿಚಾರವಾಗಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದ್ದು, ನಾನು ವಿತ್ತೀಯ ಶಿಸ್ತಿನ ಮಿತಿಯಲ್ಲೇ ಬಜೆಟ್ ಮಂಡಿಸಿದ್ದೇನೆ ಎನ್ನುತ್ತಿದ್ದ ಸಿದ್ದರಾಮಯ್ಯ ಅವರ ಕಾಲದಲ್ಲೇ ರಾಜ್ಯದ ಒಟ್ಟು ಸಾಲ 2 ಲಕ್ಷ ಕೋಟಿ ದಾಟಿತ್ತು. ಇದೆಂತಹ ಆತ್ಮಸಾಕ್ಷಿ ಸಿದ್ದರಾಮಯ್ಯ..?

2012 ರ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ನಿಮ್ಮ ಆಪ್ತರಿಗೆ ಟಿಕೆಟ್ ನೀಡಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹ್ಮದ್ ಸರಡಗಿ ಅವರನ್ನು ಅಡ್ಡಮತದಾನದ ಮೂಲಕ ಸೋಲಿಸಿದ್ದಿರಿ. ಮಾನ್ಯ ಸಿದ್ದರಾಮಯ್ಯ ಅವರೇ, ಇದು ನಿಮ್ಮ ಆತ್ಮಸಾಕ್ಷಿಯೇ?
ಮಾಂಸ ತಿಂದು ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದ ಸಿದ್ದರಾಮಯ್ಯ ಅವರು ಈಗ ಚುನಾವಣೆಯ ಹೊಸ್ತಿಲಲ್ಲಿ ನಾನೂ ಹಿಂದೂ ಎಂದು ಹೇಳಿಕೊಳ್ಳುತ್ತಿದ್ದಾರೆ. ಹಿಂದೂಗಳ ಭಾವನೆಗಳಿಗೆ ಧಕ್ಕೆಯಾದಾಗ ಸಿದ್ದರಾಮಯ್ಯ ಅವರ ಆತ್ಮಸಾಕ್ಷಿ ಎಲ್ಲಿತ್ತು?
ಕಾಂಗ್ರೆಸ್ ಸರ್ಕಾರ ಬಂದ ಬಳಿಕವೂ @siddaramaiah ಅವರು ಮೂಲ ಕಾಂಗ್ರೆಸ್ಸಿಗರಾದ ಡಿಕೆಶಿ, ರೋಶನ್ ಬೇಗ್, ಪರಮೇಶ್ವರ್ ಅವರನ್ನು ಒಂದೂವರೆ ವರ್ಷ ಸಂಪುಟದಿಂದ ಹೊರಗಿಟ್ಟರು.
ಸಿದ್ದರಾಮಯ್ಯ ಅವರೇ, ಇದೇನಾ ನಿಮ್ಮ ಆತ್ಮಸಾಕ್ಷಿ?#ಸಿದ್ದುಆತ್ಮಸಾಕ್ಷಿ
— BJP Karnataka (@BJP4Karnataka) June 10, 2022
ಕಾಂಗ್ರೆಸ್ ಸರ್ಕಾರ ಬಂದ ಬಳಿಕವೂ ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ಸಿಗರಾದ ಡಿಕೆಶಿ, ರೋಶನ್ ಬೇಗ್, ಪರಮೇಶ್ವರ್ ಅವರನ್ನು ಒಂದೂವರೆ ವರ್ಷ ಸಂಪುಟದಿಂದ ಹೊರಗಿಟ್ಟರು. ಸಿದ್ದರಾಮಯ್ಯ ಅವರೇ, ಇದೇನಾ ನಿಮ್ಮ ಆತ್ಮಸಾಕ್ಷಿ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.








