BJP | ಬೆದರಿಕೆ ತಂತ್ರದಲ್ಲಿ ಕಾಂಗ್ರೆಸಿಗರು ನಿಸ್ಸೀಮರು
ಬೆಂಗಳೂರು : ಬೆದರಿಕೆ ತಂತ್ರದಲ್ಲಿ ಕಾಂಗ್ರೆಸಿಗರು ನಿಸ್ಸೀಮರು. ಕಾಂಗ್ರೆಸ್ ರಾಷ್ಟ್ರೀಯ ನಾಯಕರಿಗೆ ಇಡಿ ನೋಟಿಸ್ ನೀಡಿದ ಏಕಮಾತ್ರ ಕಾರಣಕ್ಕೆ ದೇಶಾದ್ಯಂತ ಪ್ರತಿಭಟನೆಗೆ ಹೊರಟಿರುವ ಕಾಂಗ್ರೆಸ್ಸಿಗರಿಗೆ ನೈತಿಕತೆ ಇದೆಯೇ ಎಂದು ರಾಜ್ಯ ಬಿಜೆಪಿ ಪ್ರಶ್ನೆ ಮಾಡಿದೆ.

ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಈ ದೇಶದಲ್ಲಿ ನಕಲಿ ಗಾಂಧಿಗಳು ಕಾನೂನು ಹಾಗೂ ಸಂವಿಧಾನಕ್ಕೆ ಅತೀತರೇ? ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನ್ಯಾಯಾಲಯದ ಸೂಚನೆ ಅನ್ವಯ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ವಿಚಾರಣೆಗೆ ಎದುರಾಗಲು ಭಯವೇಕೆ?
ನಕಲಿ ಗಾಂಧಿಗಳಿಗೆ ನೋಟಿಸ್ ನೀಡಿರುವುದನ್ನು ಖಂಡಿಸಿ ಇಡಿ ಕಚೇರಿ ಎದುರು ಧರಣಿಗೆ ಕಾಂಗ್ರೆಸ್ ಕರೆ ನೀಡಿದೆ. ಕಾಂಗ್ರೆಸ್ ನಾಯಕರಲ್ಲಿ ಬಹುತೇಕರು ಈಗಾಗಲೇ ಐಟಿ, ಇಡಿ ಕಚೇರಿಗೆ ಮೆರವಣಿಗೆ ಮಾಡಿದ್ದಾರೆ. ದೇಶದ ಬಗ್ಗೆ ನಿಮಗೆ ನಿಜಕ್ಕೂ ಕಾಳಜಿ ಇದ್ದರೆ ಗಳಿಸಿದ ಅಕ್ರಮ ಸಂಪತ್ತನ್ನು ವಾಪಾಸ್ ಮಾಡಿ.
https://twitter.com/BJP4Karnataka/status/1535567081181446144?s=20&t=GQfGt2Ssvvjbokv2AkEFAA
ಬೆದರಿಕೆ ತಂತ್ರದಲ್ಲಿ ಕಾಂಗ್ರೆಸಿಗರು ನಿಸ್ಸೀಮರು. ಕಾಂಗ್ರೆಸ್ ರಾಷ್ಟ್ರೀಯ ನಾಯಕರಿಗೆ ಇಡಿ ನೋಟಿಸ್ ನೀಡಿದ ಏಕಮಾತ್ರ ಕಾರಣಕ್ಕೆ ದೇಶಾದ್ಯಂತ ಪ್ರತಿಭಟನೆಗೆ ಹೊರಟಿರುವ ಕಾಂಗ್ರೆಸ್ಸಿಗರಿಗೆ ನೈತಿಕತೆ ಇದೆಯೇ? ತಟ್ಟೆ ಬಡಿದು ಬೆಕ್ಕು ಹೆದರಿಸುವ ತಂತ್ರಕ್ಕೆ ಬಿಜೆಪಿ ಸರ್ಕಾರ ಎಂದಿಗೂ ಬೆದರದು
ಭ್ರಷ್ಟಾಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಐಟಿ ದಾಳಿಯಾದಾಗಲೂ ಕಾಂಗ್ರೆಸ್ ಇದೇ ರೀತಿ ಪ್ರತಿಭಟಿಸಿತ್ತು. ಕಾಂಗ್ರೆಸ್ ನಾಯಕರು ತಮ್ಮ ಅಕ್ರಮ ಆಸ್ತಿ ರಕ್ಷಿಸಿಕೊಳ್ಳಲು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಪ್ರತಿಭಟನೆಗೆ ಕರೆ ನೀಡಿದವರೇ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಪ್ರಶ್ನಿಸಿದೆ.