ಕೇಸರಿ ಪಡೆಯ ಟಾರ್ಗೆಟ್ ಫಿಕ್ಸ್ : ಇನ್ನೇನಿದ್ದರೂ ಆಕ್ಷನ್ ಅಷ್ಟೆ ಬಾಕಿ
ಮಂಗಳೂರು : ಸ್ಥಳೀಯ ಸಂಸ್ಥೆ ಚುನಾವಣೆ, ಬಸವ ಕಲ್ಯಾಣ, ಮಸ್ಕಿ ವಿಧಾನಸಭೆ, ಬೆಳಗಾವಿ ಲೋಕಸಭೆ ಉಪ ಚುನಾವಣೆ ಸೇರಿದಂತೆ ಭವಿಷ್ಯದಲ್ಲಿ ಎದುರಾಗಲಿರುವ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯ ಬಿಜೆಪಿ ಮುಂದಾಗಿದೆ.
ಸಂಘಟನಾತ್ಮಕ ಚಟುವಟಿಕೆಗಳತ್ತ ಗಮನ ಹರಿಸಲು ರಾಜ್ಯ ಕೇಸರಿ ಪಡೆ ಮುಂದಾಗಿದ್ದು, ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಸಿದೆ.
ಪಕ್ಷ ಬಲವರ್ಧನೆ ಸೇರಿದಂತೆ ಹಲವು ವಿಚಾರಗಳು ಸಭೆಯಲ್ಲಿ ಚರ್ಚಿಸಲಾಗಿದೆ. ಹಾಗೆ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುವ ಕೆಲಸ ಮಾಡಿದೆ. ಜೊತೆ ಜೊತೆಗೆ ಕೇಸರಿ ಪಡೆ ತಮ್ಮ ಟಾರ್ಗೆಟ್ ಫಿಕ್ಸ್ ಮಾಡಿಕೊಂಡಿದೆ.
ಹೌದು…!
ಬರೋಬ್ಬರಿ 20 ವರ್ಷಗಳ ಬಳಿಕ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ರಾಜ್ಯದ ಕೇಸರಿ ಪಡೆಯ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ.
ರಾಜ್ಯ ಬಿಜೆಪಿಯ ರಾಜಾಹುಲಿ ಬಿ.ಎಸ್.ಯಡಿಯೂರಪ್ಪ ಈ ಸಭೆಯನ್ನು ಉದ್ಘಾಟಿಸಿ, ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುವ ಮಾತುಗಳನ್ನಾಡಿದ್ದಾರೆ.
ಇದನ್ನೂ ಓದಿ : ಭಾಲ್ಕಿ ವಸತಿ ಹಗರಣ: ಖಂಡ್ರೆ-ಖೂಬಾ ಬಹಿರಂಗ ಚರ್ಚೆಗೆ ಬಿತ್ತು ಬ್ರೇಕ್..!
ಇದೇ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಸಾರಥಿ ನಳಿನ್ ಕುಮಾರ್ ಕಟೀಲ್, ಮಾತನಾಡುತ್ತಾ ಕೇಸರಿ ಕಾರ್ಯಕರ್ತರಿಗೆ ಮುಂದಿನ ಗುರಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್, ದೇಶದಲ್ಲಿ ಈಗ ಬಿಜೆಪಿ ಸ್ವರ್ಣ ಯುಗ. ಕರಾವಳಿ ಮಾದರಿ ರಾಜ್ಯದಲ್ಲಿ ಸಂಘಟನೆ ಮಾಡಲಾಗುವುದು.
ಪೇಜ್ ಪ್ರಮುಖ್, ಪಂಚರತ್ನರ ಮೂಲಕ ಸಂಘಟನೆ ಇನ್ನಷ್ಟು ಬಲ ಪಡಿಸಲಾಗುವುದು. ರಾಜರಾಜೇಶ್ವರಿ ಮತ್ತು ಶಿರಾ ಗೆಲುವು ಮಾತ್ರವಲ್ಲ, ಮುಂದಿನ ಪಂಚಾಯತಿ ಚುನಾವಣೆಯಲ್ಲೂ ಶೇ 80ರಷ್ಟು ಗೆಲ್ಲುತ್ತೇವೆ.
ಒಂದು ಸ್ಥಾನವಲ್ಲ, ಅರ್ಧ ಸ್ಥಾನವನ್ನೂ ವಿಪಕ್ಷಗಳಿಗೆ ಬಿಡುವುದಿಲ್ಲ. ಇದೇ ನಮ್ಮ ಗುರಿ ಎಂದು ಹೇಳಿದ್ದಾರೆ. ಆ ಮೂಲಕ ಚುನಾವಣೆಗೂ ಮುನ್ನ ಕೇಸರಿ ಪಡೆ ರಣ ಕಹಳೆ ಮೊಳಗಿಸಿದೆ.
ಮತ್ತೆ ನಮ್ಮದೇ ಅಧಿಕಾರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಕಾರ್ಯಕ್ರಮದಲ್ಲಿ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲವ್ ಜಿಹಾದ್ ಗೆ ಬ್ರೇಕ್ ಹಾಕಲು ಕಠಿಣ ಕಾಯ್ದೆ ಜಾರಿಗೊಳಿಸಬೇಕು : ಸಿ.ಟಿ.ರವಿ
ಮುಂದಿನ ಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಮುಂದೆ ಎದುರಾಗುವ ಎಲ್ಲಾ ಚುನಾವಣೆಗಳನ್ನು ನಾವು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಮುಂದೆ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ.
ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ, ಮುಂದಿನ 4 ವಿಧಾನಪರಿಷತ್, 2 ವಿಧಾನಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವುವಾಗಲಿದೆ.
ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಮೂಲಕ ಗ್ರಾಮ ಪಂಚಾಯತಿ ಮಟ್ಟದಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಆಶ್ರಮದ ಮಕ್ಕಳ ಜೊತೆ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ ಆಚರಣೆ
ಒಟ್ಟಾರೆ ರಾಜ್ಯ ಬಿಜೆಪಿಯ ಎಲ್ಲಾ ನಾಯಕರು ಮುಂದಿನ ಎಲ್ಲಾ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಚುನಾವಣೆಗಳಲ್ಲಿ ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಗೇ ಟಾರ್ಗೆಟ್ ಫಿಕ್ಸ್ ಮಾಡಿಕೊಂಡು ಅದರತ್ತ ಸಾಗುವ ಪಣತೊಟ್ಟಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel











