Karnataka Budget 2021 Live : ಬೆಂಗಳೂರಿಗೆ ನೀರು, ವಿದ್ಯುತ್‍ಗಾಗಿ 9 ಕೋಟಿ ಅನುದಾನ
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿಗೆ ನೀರು, ವಿದ್ಯುತ್‍ಗಾಗಿ 9 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.
ಕೊರೊನಾ ಕಾಟ, ಆರ್ಥಿಕ ಸಂಕಷ್ಟದ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪ ಅವರು 2021 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬೆಂಗಳೂರಿಗೆ ನೀರು, ವಿದ್ಯುತ್‍ಗಾಗಿ 9 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.
ಇದಲ್ಲದೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ. ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ, ಮೂಲ್ಕಿಯಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರಕ್ಕೆ 2 ಕೋಟಿ, ಕುಳಾಯಿಯಲ್ಲಿ ಮೀನು ರಫ್ತು ಸ್ಥಾವರ ನಿರ್ಮಾಣಕ್ಕೆ 12.50 ಕೋಟಿ, ಹೆಜಮಾಡಿಯಲ್ಲಿ ಮೀನುಗಾರಿಕಾ ಬಂದರಿಗೆ 181 ಕೋಟಿ ರೂ., ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ., ಕಾರ್ಕಳದಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಕ್ರಮ, ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತಲು 85 ಕೋಟಿ ರೂ. ಘೋಷಿಸಿದ್ದಾರೆ.
ಬಜೆಟ್ ನಲ್ಲಿ ಕ್ರಿಶ್ಚಿಯನ್ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಒತ್ತು ನೀಡಿರುವ ಸಿಎಂ, ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ, ಅಲ್ಪಸಂಖ್ಯಾತರಿಗೆ 1,500 ಕೋಟಿ ರೂ ಮೀಸಲು ಇರಿಸಲಾಗುವುದು ಎಂದು ತಿಳಿಸಿದ್ದಾರೆ.









