Karnataka Budget : ಬಜೆಟ್ ನಲ್ಲಿ ಮಹದಾಯಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ ಅನುದಾನ
ಬೆಂಗಳೂರು : ರಾಜ್ಯ ಬಜೆಟ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪನವರು ಮಹದಾಯಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ ಅನುದಾನ ಘೋಷಣೆ ಮಾಡಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರು 2021 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಮಹದಾಯಿ ಯೋಜನೆಗೆ 1,677 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ 21,474 ಕೋಟಿ ರೂಪಾಯಿ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ. ಕೃಷ್ಣಾ ಭಾಗ್ಯ ಜಲನಿಗಮ 5600 ಕೋಟಿ ರೂ. ಅನುದಾನ, ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಗೆ ಸರ್ಕಾರದ ನೆರವಿನ ಘೋಷಣೆ. ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ಕ್ರಮ. ವಿಶ್ವಬ್ಯಾಂಕ್ ನೆರವಿನ ಡ್ರಿಪ್ ಯೋಜನೆ ಅಡಿ 1500 ಕೋಟಿ ವೆಚ್ಚ. 58 ಆಣೆಕಟ್ಟುಗಳ ಪುನಶ್ಚೇತನ ಮತ್ತು ಅಭಿವೃದ್ಧಿಗೆ ಅನುದಾನ ನೀಡಲು ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.