Karnataka Budget 2021 Live : ಮಹಿಳೆಯರಿಗೆ ವಿಶೇಷ ಯೋಜನೆಗಳು
1 min read
Karnataka Budget 2021 Live : ಮಹಿಳೆಯರಿಗೆ ವಿಶೇಷ ಯೋಜನೆಗಳು
ಬೆಂಗಳೂರು : ಕೊರೊನಾ ಕಾಟ, ಆರ್ಥಿಕ ಸಂಕಷ್ಟದ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪ ಅವರು 2021 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ತಮ್ಮ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.
ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ತಿಳಿಸಿರುವ ಸಿಎಂ, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ಒದಗಿಸಲಾಗುತ್ತದೆ. ಮಹಿಳಾ ಉದ್ಯಮಿಗಳಿಗೆ ಶೇ 4 ರ ಬಡ್ಡಿದರದಲ್ಲಿ 2 ಕೋಟಿ ವರೆಗೆ ಸಾಲ,
ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ ವ್ಯವಸ್ಥೆ. ವನಿತಾ ಸಂಗಾತಿ ಹೆಸರಿನಲ್ಲಿ ಬಸ್ ಪಾಸ್. ಮಹಿಳೆಯರ ಸುರಕ್ಷತೆ ಹೆಚ್ಚಳ. ನಿರ್ಭಯಾ ಯೋಜನೆ ಅಡಿಯಲ್ಲಿ 7,500 ಸಿಸಿಟಿವಿ ಅಳವಡಿಕೆ. ಮಹಿಳೆಯರ ಅಭಿವೃದ್ಧಿಗೆ 37,000 ಕೋಟಿ ಮೀಸಲು ನೀಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.
