Karnataka Budget 2021 Live : ಮಲೆನಾಡು ಭಾಗಕ್ಕೆ ಸಿಕ್ಕಿದ್ದೇನು..?
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಬಜೆಟ್ ನಲ್ಲಿ ಮಲೆನಾಡು ಭಾಗಕ್ಕೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರು 2021 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ, ಖಾಸಗಿ ಸಹಭಾಗಿತ್ವದಲ್ಲಿ 2,500 ಕೋಟಿ ವೆಚ್ಚದಲ್ಲಿ ಬೇಲೆಕೇರಿ ಬಂದರು ಅಭಿವೃದ್ಧಿ ಮಾಡುವುದಾಗಿ ತಿಳಿಸಿದ್ದಾರೆ.
ಶಿರಸಿ ಸರ್ಕಾರಿ ಆಸ್ಪತ್ರೆಯನ್ನು 200 ಹಾಸಿಗೆಗಳ ಮೇಲ್ದರ್ದೆಜೆಗೆ, ಸಿದ್ಧಾಪುರದಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆ,ಕಡಲಧಾಮ ಸ್ಥಾಪನೆಗೆ 1 ಕೋಟಿ ಅನುದಾನ, ಕಾರವಾರ ಬಂದರಿಗೆ ಶಾಶ್ವತ ಅಗ್ನಿಶಾಮಕ ಉಪಕರಣಕ್ಕೆ 19 ಕೋಟಿ ರೂ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 31,028 ಕೋಟಿ ರೂ., ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 62,150 ಕೋಟಿ, ಆರ್ಥಿಕ ಮತ್ತು ಅಭಿವೃದ್ಧಿ ವಲಯಕ್ಕೆ 52,529 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 7,795 ಕೋಟಿ ರೂ., ಸಂಸ್ಕøತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 2,645 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯಾದಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪನೆ ಮಾಡುವುದಾಗಿ ತಿಳಿಸಿರುವ ಸಿಎಂ, ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂಪಾಯಿ ಅನುದಾನ, ರೈಲ್ವೆ ಯೋಜನೆಗಳ ಭೂಸ್ವಾಧಿನಕ್ಕಾಗಿ 2,260 ಕೋಟಿ ರೂಪಾಯಿ, ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ, ರಾಜ್ಯಾದಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.