Karnataka Budget 2022 : ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದೇನು..?
ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್ ಮಂಡಿಸಿದ್ದಾರೆ.. ವಿಧಾನಸಭೆಯಲ್ಲಿ ಮಂಡಿಸಲಾದ 2022ರ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿ , ಆರೋಗ್ಯ , ಮಹಿಳಾ ಸಬಲೀಕರ ಕ್ಷೇತ್ರಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.. ಜೊತೆಗೆ ಎಲ್ಲಾ ಕ್ಷೇತ್ರಗಳಿಗೂ ಬಂಪರ್ ಕೊಡುಗೆ ನೀಡಲಾಗಿದೆ..
Budget Highlights
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಬಹುವಿಧ ವಸತಿ ಶಾಲೆಗಳಿಗೆ ಎಪಿಜೆ ಅಬ್ದುಲ್ ಕಲಾಂ ಹೆಸರು ನೀಡಿ ಸಿಬಿಎಸ್ ಇ ಮಾನ್ಯತೆ ಪಡೆಯಲು ಪ್ರಯತ್ನ..
ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಒದಗಿಸಿ ಉನ್ನತೀಕರಣ – 25 ಕೋಟಿ ಹಂಚಿಕೆ
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ 100 ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಿಸಲು 10 ಕೊಟಿ ಅನುದಾನ
ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ
ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳ ನಿರ್ಮಾಣ
ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ
ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ
ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.
‘ನೋಡಿ ಕಲಿ ಮಾಡಿ ತಿಳಿ’ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ ಮಾಡಲಾಗುವುದು ಎಂದು ಸಿಎಂ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ
ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ ಹಾಗೂ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ
ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ , ಬಾಗಲಕೋಟೆ ಭಾಗಗಳಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ








