Karnataka Budget 2023 : ಬಜೆಟ್ ಮಂಡನೆ ಆರಂಭ…!!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ನೇತೃತ್ವದ ಸರ್ಕಾರಾವಧಿಯ 2 ನೇ ಹಾಗೂ ಕೊನೆಯ ಬಜೆಟ್ ಮಂಡಿಸುತ್ತಿದ್ದಾರೆ.. ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಆರಂಭಗೊಂಡಿದ್ದು ಬಜೆಟ್ ಆರಂಭದಲ್ಲಿಯೇ ಮೋದಿ ಕಾರ್ಯಕ್ಕೆ ಸಿಎಂ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಜಿ20 ಶೃಂಗ ಸಭೆ ರಾಜ್ಯದಲ್ಲಿಯೂ ನಡೆದಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಬಜೆಟ್ ಭಾಷಣದಲ್ಲಿ ಹಲವಾರು ವಿಷಯಗಳ ಬಗ್ಗೆ ಬಸವರಾಜಬೊಮ್ಮಾಯಿ ಅವರು ಮಾತನಾಡಿದ್ದಾರೆ.. ಅಂತೆಯೇ ರಾಜ್ಯದ ಹಣಕಾಸು ಪರಿಸ್ಥಿತಿ ಸದೃಢವಾಗಿದ್ದು ರಾಜಸ್ವ ಸಂಗ್ರಹ ಹೆಚ್ಚಾಗಿದೆ. ಜಿಎಸ್ಟಿ ಸಂಗ್ರಹ ಶೇ 26ರಷ್ಟು ವೃದ್ಧಿಯಾಗಿದೆ. ಮುದ್ರಣ ಹಾಗೂ ನೋಂದಣಿ ಶುಲ್ಕ ಸಂಗ್ರಹವೂ ಹೆಚ್ಚಾಗಿದೆ. ತೆರಿಗೆ ಸಂಗ್ರಹ ಶೇ 20ರಷ್ಟು ಹೆಚ್ಚಾಗಿದೆ ಎಂದು ಮಾಹಿತಿ ನೀಡಿದ್ದಾರೆ..








