ಶಿಕ್ಷಣಕ್ಕೆ ರಾಜ್ಯ ಬಜೆಟ್ ಕೊಡುಗೆ
Karnataka Budget | ಶಿಕ್ಷಣ ಇಲಾಖೆಗೆ ರೂ.31,980 ಕೋಟಿ ಅನುದಾನ
ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ
ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ
‘ನೋಡಿ ಕಲಿ ಮಾಡಿ ಕಲಿ’ ಪರಿಕಲ್ಪನೆ ಯೋಜನೆ ಘೋಷಣೆ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆ ರೂ.31,980 ಕೋಟಿ ಅನುದಾನ ನೀಡಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ತಮ್ಮ ಮೊದಲ ರಾಜ್ಯ ಬಜೆಟ್ ಮಂಡನೆ ಮಾಡಿದ ಬಸವರಾಜ ಬೊಮ್ಮಾಯಿ, ಶಿಕ್ಷಣ ಕ್ಷೇತ್ರಕ್ಕೆ ವಿವಿಧ ಯೋಜನೆಗಳನ್ನು ಪ್ರಕಟಿಸಿದರು. ಮುಖ್ಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ -2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡುವುದಾಗಿ ಪ್ರಕಟಿಸಿದರು. ಹೋಬಳಿ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳಿರುವ ಶಾಲೆಗಳ ಉನ್ನತೀಕರಣದ ಮೂಲಕ ಅವುಗಳನ್ನು ‘ಮಾದರಿ ಶಾಲೆ’ಗಳನ್ನಾಗಿ ಮಾಡುವುದಾಗಿ ಘೋಷಿಸಿದರು.
ಇದಲ್ಲದೆ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ ಅನುದಾನ ಘೋಷಿಸಿದರು. ಸರ್ಕಾರಿ ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ ನೀಡಲಾಗುವುದು ಎಂದು ತಿಳಿಸಿದರು.
‘ನೋಡಿ ಕಲಿ ಮಾಡಿ ಕಲಿ’ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್- ಇನ್ ಎ ಕಿಟ್ ವಿತರಣೆ. ರಾಜ್ಯದ ಏಳು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ತಂತ್ರಜ್ಞಾನ ಸಂಸ್ಥೆಗಳನ್ನಾಗಿ ಉನ್ನತೀಕರಣ. ಚಾಮರಾಜನಗರ, ಬೀದರ್, ಹಾಸನ, ಹಾವೇರಿ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೋಷಿಸಿದ್ದಾರೆ. karnataka-budget-allocation for Education Department
ಇದಲ್ಲದೇ ಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವ ಧನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ. ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳಕ್ಕೆ ಸ್ಕೀಮ್ ರೂಪಿಸಲಾಗಿದ್ದು, ಸೇವಾನುಭವ ಆಧಾರದಲ್ಲಿ ಸಾವಿರದಿಂದ 1500 ರೂಗಳ ಹೆಚ್ಚಳ ಹಾಗೂ ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುವುದು ಎಂದು ವಿವರಿಸಿದ್ದಾರೆ.