Karnataka budget | ಬೊಮ್ಮಾಯಿ ಚೊಚ್ಚಲ ಬಜೆಟ್ ಗೆ ಕ್ಷಣಗಣನೆ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ.
ಮುಖ್ಯಮಂತ್ರಿಗಳು ಇಂದು ಮಧ್ಯಾಹ್ನ 12.30ಕ್ಕೆ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸಲಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಹಿನ್ನೆಲೆಯಲ್ಲಿ ಸಾಮಾನ್ಯವಾಗಿಯೇ ಬಜೆಟ್ ನಲ್ಲಿ ಹಲವಾರು ಜನಪರ ಘೋಷಣೆಗಳನ್ನು ನಿರೀಕ್ಷೆ ಮಾಡಲಾಗಿದೆ.
ಚುನಾವಣಾ ದೃಷ್ಠಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎಲ್ಲ ವರ್ಗದವರಿಗೆ, ಎಲ್ಲ ವಲಯಗಳಿಗೆ ಮುಟ್ಟುವ ಬಜೆಟ್ ಮಾಡಬಹುದು.
ಜೊತೆಗೆ ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ನೀರಾವರಿ, ಆರೋಗ್ಯ, ಮೂಲ ಸೌಕರ್ಯ, ಪ್ರವಾಸೋದ್ಯಮ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ.