Karnataka Budget Live 2021: ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ
1 min read
Karnataka Budget Live 2021: ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ
ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲೆ ಯಾವುದೇ ತೆರಿಗೆ ವಿಧಿಸದೇ ಇರಲು ಸರ್ಕಾರ ನಿರ್ಧರಿಸಿದೆ.
ಅಬಕಾರಿ ತೆರಿಗೆ ಹೆಚ್ಚಳ ಇಲ್ಲ. ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಇಲ್ಲ ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ.
ಇದಲ್ಲದೆ ನೋಂದಣಿ, ಮುದ್ರಾಂಕ ಶುಲ್ಕ ಶೇ.5ರಿಂದ 3ಕ್ಕೆ ಇಳಿಕೆ ಮಾಡಿದ್ದಾರೆ. ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ವನಿತಾ ಸಂಗಾತಿ ಬಸ್ ಪಾಸ್ ವ್ಯವಸ್ಥೆ ಮಾಡೋದಾಗಿ ತಿಳಿಸಿದ್ದಾರೆ.
ಯಶವಂತಪುರ ಎಪಿಎಂಸಿ ಮೇಲ್ದರ್ಜೆಗೆ ಏರಿಕೆ, ಭದ್ರಾ ಮೇಲ್ದಂಡೆ ಯೋಜನೆಗೆ 21,477 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.
ಸಿಂಗೇನ ಅಗ್ರಹಾರದಲ್ಲಿ ತರಕಾರಿ ಮಾರುಕಟ್ಟೆ, ಗೋದಾಮು ಮತ್ತು ಅಂಗಡಿ ನಿರ್ಮಾಣಕ್ಕೆ ಅನುದಾನ. ಮಹಿಳಾ ಉದ್ಯೋಗಿಗಳಿಗೆ 6 ತಿಂಗಳು ಪ್ರಸೂತಿ ರಜೆ.
ಬ್ಯಾಡಗಿ ಮೆಣಸಿನಕಾಯಿಗಾಗಿ ಗುಣ ವಿಶ್ಲೇಷಣಾ ಘಟಕ ಸ್ಥಾಪನೆ, ಸಾವಯವ ಕೃಷಿಗೆ 500 ಕೋಟಿ ರೂಪಾಯಿ. ಬೆಂಗಳೂರಿನಲ್ಲಿ 3ಕಡೆ ಮೇಲ್ಸೆತುವೆ.ಮಲ್ಲೇಶ್ವರಂನಲ್ಲಿ ಕರ್ನಾಟಕ ಸಂಸ್ಕøತಿ ಕೇಂದ್ರ ಸ್ಥಾಪನೆ, ಬೆಂಗಳೂರಿನಲ್ಲಿ 67 ಕಿಲೋ ಮೀಟರ್ ಫೆರಿಫರಲ್ ರಿಂಗ್ ರಸ್ತೆ.
ಮೇಕೆದಾಟು ಯೋಜನೆಗೆ 9 ಸಾವಿರ ಕೋಟಿ ರೂಪಾಯಿ, ಕೆಸಿ ವ್ಯಾಲಿ ನೀರು ಶುದ್ದೀಕರಣಕ್ಕೆ 450 ಕೋಟಿ ರೂಪಾಯಿ.
ಜಯದೇವ, ಕೆಸಿ ಜನರಲ್ ಆಸ್ಪತ್ರೆಗೆ 20 ಕೋಟಿ ರೂಪಾಯಿ, 50 ಶಾಲೆಗಳ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಅನುದಾನ.
ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ 50 ಕೋಟಿ ರೂಪಾಯಿ ಮೀಸಲು, ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ 50 ಕೋಟಿ ರೂ.ಅನುದಾನ.