ಗದಗ: ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮುದ್ರಣ ಕಾಶಿ ಗದಗ್‍ನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಿಗ್ಗೆಯಿಂದಲೇ ಜಿಲ್ಲೆಯಾದ್ಯಂತ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಕರ್ನಾಟಕ ಬಂದ್‍ಗೆ ಜನರು ಬೆಂಬಲ ನೀಡಿದ್ದಾರೆ.
ಬಂದ್ ಬೆಂಬಲಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗದಗ್‍ನ ನಗರದ ಮಾರುಕಟ್ಟೆ ಬಂದ್ ಮಾಡಲು ಯತ್ನಿಸಿದರು. ಈ ವೇಳೆ ಪೆÇಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ನಡು ರಸ್ತೆಯಲ್ಲಿ ಕುಳಿತು ಹೋರಾಟಗಾರರು ಪ್ರತಿಭಟನೆ ನಡೆಸಿದರು.

ಮತ್ತೊಂದೆಡೆ, ಗದಗ್ ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಹೈಡ್ರಾಮಾ ನಡೆದಿದೆ. ಕರವೇ ಕಾರ್ಯಕರ್ತರು ಮತ್ತು ಪೆÇಲೀಸರ ನಡುವೆ ತಳ್ಳಾಟ ನೂಕಾಟ ನಡೆಯಿತು. ಕರವೇ ಕಾರ್ಯಕರ್ತರು ರಸ್ತೆ ತಡೆ ನಡೆಸಲು ಮುಂದಾದಾಗ ಹೈಡ್ರಾಮಾ ನಡೆಯಿತು. ಬಸ್ ತಡೆಯಲು ಯತ್ನಿಸಿದ ಕಾರ್ಯಕರ್ತರು ಬಸ್‍ನಡಿ ಮಲಗಲು ಯತ್ನಿಸಿದ್ದಾರೆ. ಈ ವೇಳೆ ಯುವಕನೊಬ್ಬ ಹುಬ್ಬಳ್ಳಿ-ಗದಗ ಬಸ್‍ನಡಿ ದಿಢೀರ್ ಬಿದ್ದ ಘಟನೆಯೂ ನಡೆಯಿತು. ಬಸ್ ಡ್ರೈವರ್ ಜಾಗೂರಕತೆಯಿಂದ ಆತ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾನೆ. ಪ್ರತಿಭಟನಾ ನಿರತ ಕಾರ್ಯಕರ್ತರನ್ನು ನಿಯಂತ್ರಣ ಮಾಡಲು ಪೆÇಲೀಸರು ಹರಸಾಹಸ ನಡೆಸುತ್ತಿದ್ದಾರೆ.








