ಬಳ್ಳಾರಿ: ರೈತ ವಿರೋಧಿ ಮಸೂದೆಗಳ ವಿರುದ್ಧ ಇಂದು ರೈತ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿವೆ.
ಈ ನಡುವೆ, ಬಳ್ಳಾರಿಯಲ್ಲಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಕಲ್ಯಾಣ ಸ್ವಾಮೀಜಿ, ತಮ್ಮ ಮಸೂದೆ ಹಾಗೂ ಕಾಯ್ದೆ ವಿಚಾರದಲ್ಲಿ ದ್ವಂದ್ವ ಹೇಳಿಕೆ ನೀಡಿದ್ದಾರೆ.
ಬಳ್ಳಾರಿಯ ರಾಯಲ್ ವೃತ್ತದಲ್ಲಿ ರೈತ ಹಾಗೂ ಕನ್ನಡಪರ ಸಂಘಟನೆಗಳು ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬಳ್ಳಾರಿಯ ಕಮ್ಮರಜೋಡು ಗ್ರಾಮದ ಕಲ್ಯಾಣ ಸ್ವಾಮೀಜಿ, ರೈತರ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದರು.
ಇದೇ ವೇಳೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಂದಿರುವ ಕಾಯ್ದೆಗಳು ರೈತ ವಿರೋಧಿ ಅಲ್ಲ. ಈ ಮಸೂದೆಗಳು ರೈತ ವಿರೋಧಿ ಎಂದು ನಾನು ತಿಳಿದುಕೊಂಡಿಲ್ಲ. ಮೋದಿ ಸರ್ಕಾರ ರೈತರ ಖಾತೆಗೆ ಹಣ ಜಮೆ ಮಾಡುತ್ತಿದೆ ಎನ್ನುತ್ತ ತಮ್ಮ ದ್ವಂದ್ವ ನಿಲುವು ಪ್ರದರ್ಶನ ಮಾಡಿದ್ದಾರೆ.
ಈ ಹಿಂದೆ ಕೊರೊನಾ ಅನ್ನೋದೆ ಸುಳ್ಳು, ನಾನು ಯಾವುದೇ ಮಾಸ್ಕ್ ಧರಿಸುವುದಿಲ್ಲ, ಸ್ಯಾನಿಟೈಸರ್ ಉಪಯೋಗಿಸುವುದಿಲ್ಲ. ಕೊರೊನಾ ಸೋಂಕಿತರನ್ನು ಮುಟ್ಟಿ ಬರುತ್ತೇನೆ ಎಂದು ಹೇಳಿದ್ದ ಕಲ್ಯಾಣ ಸ್ವಾಮೀಜಿ, ಇಂದು ರಾಯಲ್ ವೃತ್ತದಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಂಚುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








