ರಾಜ್ಯ “ಮಿನಿ ಸಮರ”ದಲ್ಲಿ ಕಾಂಗ್ರೆಸ್ ಗೆ ಮುನ್ನಡೆ congress
ಬೆಂಗಳೂರು : ರಾಜ್ಯದ ಬೆಳಗಾವಿ ಲೋಕಸಭಾ, ಮಸ್ಕಿ ವಿಧಾನಸಭಾ, ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಅಂಚೆ ಮತ ಎಣಿಕೆಯಲ್ಲಿ ಬೆಳಗಾವಿ, ಮಸ್ಕಿ ಮತ್ತು ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಗಳಿಸಿದೆ.
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಮಧ್ಯೆ ಟಫ್ ಸ್ಪರ್ಧೆ ನಡೆಯುತ್ತಿದೆ. 9000 ಸಾವಿರ ಮತಗಳಿಂದ ಕಾಂಗ್ರೆಸ್ ಮುನ್ನಡೆ
ಮಸ್ಕಿಯಲ್ಲಿ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ ಮತ್ತು ಕಾಂಗ್ರೆಸ್‍ನ ಬಸನಗೌಡ ತುರ್ವೀಹಾಳ್ ನಡುವೆ ನೆಕ್ ಟು ನೆಕ್ ಫೈಟ್ ನಡೆದಿದೆ. ಇಬ್ಬರು ಗೆಲ್ಲಲು ಇಲ್ಲಿ ಸಮಾನ ಅವಕಾಶಗಳಿವೆ. ಮಸ್ಕಿಯಲ್ಲಿ 1,368 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಮಲ್ಲಮ್ಮ ಮತ್ತು ಬಿಜೆಪಿಯ ಶರಣು ಸಲಗಾರ ನಡುವೆ ಸ್ಪರ್ಧೆಯಿದೆ.