karnataka politics | ರಾಜ್ಯ ಸಂಪುಟ ಸರ್ಕಸ್ : ಆಕಾಂಕ್ಷಿಗಳ ಗುಪ್ ಗುಪ್ ಸಭೆ
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಮಾತುಗಳು ಮುನ್ನಲೆಗೆ ಬಂದಿವೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಮಾತ್ರ ಬಾಕಿ ಇದೆ.
ಈ ಹಿನ್ನೆಲೆಯಲ್ಲಿ ಅಧಿಕಾರ ಇದ್ದಾಗಲೇ ಸಚಿವರಾಗಬೇಕು ಎಂದು ಬಿಜೆಪಿಯ ಕೆಲ ಶಾಸಕರು ಪಟ್ಟು ಹಿಡಿದ್ದಾರೆ.
ಮುಖ್ಯವಾಗಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ, ರಾಜೂಗೌಡ, ಬಸನಗೌಡ ಯತ್ನಾಳ್ ಸೇರಿದಂತೆ ಹಲವು ಹಿರಿಯ ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕಾಗಿ ಭಾರಿ ಲಾಬಿ ನಡೆಸುತ್ತಿದ್ದಾರೆ.

ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇದ್ದು, ಈ ಸ್ಥಾನಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೇ ಮುಂದಿನ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಹೊಸ ಹುರುಪಿನಿಂದ ಕೆಲಸ ಮಾಡುವ ಯುವ ನಾಯಕರಿಗೆ ಮಣೆ ಹಾಕಬೇಕು.
ಈಗಾಗಲೇ ಸಚಿವ ಸ್ಥಾನ ಅಲಂಕರಿಸಿರುವ ಹಿರಿಯ ಶಾಸಕರು ತಮ್ಮ ಸ್ಥಾನದಿಂದ ಇಳಿದು ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ವಾದ ಮಂಡಿಸುತ್ತಿದ್ದಾರೆ. ಇದೇ ವಿಚಾರವಾಗಿ ಗುಪ್ ಗುಪ್ ಸಭೆಗಳನ್ನೂ ಕೂಡ ಮಾಡುತ್ತಿದ್ದಾರೆ.