ಕೊರೊನಾ ಪಾಸಿಟಿವ್ ಇರುವುದು ಧೃಡವಾದ ಬಳಿಕ ಇಷ್ಟುದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇಂದು ಸಂಜೆ 4 ಗಂಟೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಕುರಿತಂತೆ ಆಸ್ಪತ್ರೆ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಸಿಎಂ ಯಡಿಯೂರಪ್ಪ ಅವರು ಇದೀಗ ಗುಣಮುಖರಾಗಿದ್ದಾರೆ. ಮತ್ತೆ ವೈದ್ಯಕೀಯ ಪರೀಕ್ಷೆಗೆಒಳಪಡಿಸಿದ ವೇಳೆ ಸಿಎಂ ಬೆಸ್ ವೈ ಅವರ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದೆ ಎನ್ನಲಾಗಿದೆ. ಹೀಗಾಗಿ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ರಾಜಾಹುಲಿ ಬೆಂಬಲಿಗರಲ್ಲಿ ಸಂತಸ ಮನೆ ಮಾಡಿದೆ.
ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಮಣಿದ ಸರ್ಕಾರ : ಸಮಿತಿ ರಚನೆಗೆ ಒಪ್ಪಿಗೆ – ಆರ್. ಆಶೋಕ್
ವಕ್ಫ್ ಮಂಡಳಿ ಹಿಂದೂಗಳು ಮತ್ತು ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದೇನೆ. ಈ ಹೋರಾಟದಲ್ಲಿ ಬಿಜೆಪಿಗೆ ತಕ್ಕ ಮಟ್ಟಿನ ಜಯ ದೊರಕಿದೆ....