Basavaraja Bommai | ಮಧ್ಯರಾತ್ರಿ ಸಿಎಂ ಬೊಮ್ಮಾಯಿ ತುರ್ತು ಸುದ್ದಿಗೋಷ್ಠಿ
ಬೆಂಗಳೂರು : ಬಿಜೆಪಿ ಯುವ ಮೋರ್ವಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ಸಿಎಂ ಬಸವರಾಜ ಬೊಮ್ಮಾಯಿ ರದ್ದುಗೊಳಿಸಿದ್ದಾರೆ.
ಬುಧವಾರ ಮಧ್ಯರಾತ್ರಿ ಸಿಎಂ ಬೊಮ್ಮಾಯಿ ತುರ್ತು ಸುದ್ದಿಗೋಷ್ಠಿ ಕರೆದು ಈ ವಿಷಯವನ್ನು ತಿಳಿಸಿದ್ದಾರೆ.
ಅತ್ಯಂತ ಅಮಾಯಕ ಯುವಕನ ಕೊಲೆ ಆಗಿದೆ, ಈ ಘಟನೆ ನೋಡಿ ಮನಸ್ಸಿಗೆ ಶಾಂತಿ ಇರಲಿಲ್ಲ.
ಯುವಕನ ತಾಯಿಯ ಆಕ್ರಂದನ ನೋಡಿ ಮನಸ್ಸಿಗೆ ನೋವಾಯಿತು.

ಈ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ನಡೆಸುವುದು ಸೂಕ್ತ ಅಲ್ಲ ಎಂಬ ಕಾರಣಕ್ಕಾಗಿ ಜನೋತ್ಸವ ಹಾಗೂ ಸಾಧನಾ ಸಮಾವೇಶ ರದ್ದು ಗೊಳಿಸಲಾಗಿದೆ.
ಬದಲಾಗಿ ಕೇವಲ ಪತ್ರಿಕಾಗೋಷ್ಠಿ ಮಾತ್ರ ಇರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ರು.
ಇದೇ ವೇಳೆ ಪ್ರವೀಣ್ ಹತ್ಯೆ ಬಗ್ಗೆ ಮಾತನಾಡಿ, ಹಿಂಸೆಯ ಮೂಲಕ ದ್ವೇಷ ಬಿತ್ತುವ ಹುನ್ನಾರದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ.
ಇದು ಕೇವಲ ಕರ್ನಾಟಕ ಮಾತ್ರವಲ್ಲ ಕೇರಳ, ರಾಜಸ್ಥಾನ, ಉತ್ತರ ಪ್ರದೇಶದಲ್ಲಿ ನಡೆದಿದೆ.
ಇಂತಹ ಕೃತ್ಯಗಳನ್ನು ತಡೆಯಲು ಕ್ರಮ ತೆಗೆದುಕೊಳ್ಳಲಾಗುವುದು.
ವಿಶೇಷವಾಗಿ ಕಾನೂನು ಕ್ರಮ ಜರಗಿಸಲು ಚಿಂತನೆ ಇದೆ ಎಂದು ತಿಳಿಸಿದರು.








