ಇಂದು ಸಂಜೆ ಸಚಿವರ ಜೊತೆ ಸಿಎಂ ಮಹತ್ವದ ಸಭೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಗೆ ಕಡಿವಾಣ ಹಾಕಲು ಸರ್ಕಾರ ಸಾಲು ಸಾಲು ಲಾಕ್ ಡೌನ್ ಗಳನ್ನು ಜಾರಿ ಮಾಡಿದೆ.
ನಿನ್ನೆಯಿಂದ ರಾಜ್ಯದಲ್ಲಿ ಜನತಾ ಲಾಕ್ ಡೌನ್ 2.0 ಜಾರಿಯಲ್ಲಿದ್ದು, ಈ ಬಗ್ಗೆ ಚರ್ಚಿಸಲು ಇಂದು ಸಂಜೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹತ್ವದ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ನಡೆಸಲಿದ್ದಾರೆ.
ಸಂಜೆ 6 ಗಂಟೆಗೆ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯಲಿದೆ. ಇದರಲ್ಲಿ ಕೋವಿಡ್ ಉಸ್ತುವಾರಿ ಸಚಿವರಾದ ಡಿಸಿಎಂ ಡಾ. ಅಶ್ವತ್ಥ ನಾರಾಯಣ್,
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ. ಸುಧಾಕರ್, ಆರ್.ಅಶೋಕ್, ಅರವಿಂದ ಲಿಂಬಾವಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಭಾಗವಹಿಸಲಿದ್ದಾರೆ.
ಈ ವೇಳೆ ಲಾಕ್ ಡೌನ್ 2.0 ಪರಿಣಾಮದ ಕುರಿತು ಸಭೆಯಲ್ಲಿ ಅವಲೋಕನ ನಡೆಸಲಿದೆ.
ಹಾಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಗಳು, ಐಸಿಯು, ವೆಂಟಿಲೇಟರ್ ಲಭ್ಯತೆ, ಆಕ್ಸಿಜನ್ ಕಾನ್ಸನ್ ಟ್ರೇಟರ್ ನಿಂದಾಗುತ್ತಿರುವ ಉಪಯೋಗ, ಔಷಧ ಲಭ್ಯತೆ ಕುರಿತು ಚರ್ಚೆ ನಡೆಸಲಾಗುತ್ತದೆ.