Congress | ಕರ್ನಾಟಕ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಮನೆಯಲ್ಲಿ, ಈಗ ಮನೆಯೊಂದು ಮೂರು ಬಾಗಿಲು! ದೆಹಲಿ ಪ್ರವಾಸದ ಮೂಲಕ ತೇಪೆ ಹಚ್ಚುವ ಕಾರ್ಯ ನಡೆದಿದೆ ಎಂದು ರಾಜ್ಯ ಬಿಜೆಪಿ ಘಟಕ ಕುಟುಕಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಆಂತರಿಕ ಕಲಹ ಯಾವ ಸ್ವರೂಪದಲ್ಲಿದೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಯಿಂದಲೇ ತಿಳಿಯಬಹುದು.
ಮೇಕೆದಾಟು ಪಾದಯಾತ್ರೆಯಿಂದ ಡಿ.ಕೆ.ಶಿವಕುಮಾರ್ ಅವರು ದೆಹಲಿಯ ನಾಯಕರಿಗೆ ಹತ್ತಿರ ಆಗಬಹುದೆಂಬ ಭಯ ಸಿದ್ದರಾಮಯ್ಯ ಅವರಿಗೆ ಕಾಡುತ್ತಿದೆ. ಈ ಭಯದ ನಡುವೆಯೂ ಮೇಕೆದಾಟು ಪಾದಯಾತ್ರೆ ಎಂಬ #ಸುಳ್ಳಿನಜಾತ್ರೆ ಯಲ್ಲಿ ಪಾಲ್ಗೊಳ್ಳಬೇಕಾಗಿದೆ. ಉದರ ನಿಮಿತ್ತಂ ಬಹುಕೃತ ವೇಷಂ!!!
ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಅವರಿಗೆ, ಹಳೆ ಮೈಸೂರು ಪ್ರಾಂತ್ಯದಲ್ಲಿ ತಮ್ಮ ಪ್ರಭಾವ ಮಾಸುತ್ತಿರುವುದು ತಿಳಿದಿದೆ. ಮೇಕೆದಾಟು ಪಾದಯಾತ್ರೆ ಪ್ರಹಸನದಲ್ಲಿ ಲಾಭವಾಗುವುದು ಡಿ.ಕೆ.ಶಿವಕುಮಾರ್ ಅವರಿಗೆ ಎಂದು ಸಿದ್ದರಾಮಯ್ಯಗೆ ತಿಳಿದಿದೆ.ಸಿದ್ದರಾಮಯ್ಯ ಅವರೇ, ಇದು ನಿಮಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ ಅಲ್ವೇ ಎಂದು ಕುಟುಕಿದೆ.
Karnataka congress-BJp tweet war









