ರಾಜಭವನಕ್ಕೆ ಮುತ್ತಿಗೆ – ಕಾಂಗ್ರೆಸ್ ನಾಯಕರನ್ನ ವಶಕ್ಕೆ ಪಡೆದ ಪೊಲೀಸರು…
ಇ ಡಿ ಯಿಂದ ರಾಹುಲ್ ಗಾಂಧಿ ವಿಚಾರಣೆಯನ್ನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ರಾಜಭವನ ಮುತ್ತಿಗೆಗೆ ಯತ್ನಿಸಿದೆ. ಈ ವೇಳೆ ಕಾಂಗ್ರೆಸ್ ನಾಯಕರಾದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ರಾಜಭವನದ ವರೆಗೆ ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು. ಈವೇಳೆ ಇಂಡಿಯನ್ ಎಕ್ಸ್ ಪ್ರೆಸ್ ಸರ್ಕಲ್ ನಲ್ಲಿ ಕಾಂಗ್ರೆಸ್ ನಾಯಕರನ್ನ ಪೊಲೀಸರು ವಶಕ್ಕೆ ಪಡೆದು ಹೈಗ್ರೌಂಡ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
https://twitter.com/i/status/1537336785982078976
ಕೇಂದ್ರ ಸರ್ಕಾರ ರಾಷ್ಟ್ರೀಯ ಕಾಂಗ್ರೆಸ್ ನಾಯಕರಿಗೆ ಮಾತ್ರ ಕಿರುಕುಳ ನೀಡುತ್ತದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜಭವನ ಮುತ್ತಿಗೆಗೆ ಕರೆಕೊಟ್ಟಿದ್ದರು. ರಾಜ್ಯದಲ್ಲಿ ಅಷ್ಟೇ ಅಲ್ಲ ದೇಶಾದ್ಯಂತ ಕಾಂಗ್ರೆಸ್ ರಾಜಭವನ ಚಲೋ ಹಮ್ಮಿಕೊಂಡಿದೆ.








