Karnataka congress | ಬಿಜೆಪಿಯಲ್ಲಿರುವುದು ಅರ್ಧ ಭ್ರಷ್ಟರು, ಇನ್ನರ್ಧ ಪುಕ್ಕಲುಗಳು!
ಬೆಂಗಳೂರು : ಬಿಜೆಪಿಯಲ್ಲಿರುವುದು ಅರ್ಧ ಭ್ರಷ್ಟರು, ಇನ್ನರ್ಧ ಪುಕ್ಕಲುಗಳು ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದ್ದಾರೆ.
ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಬಿಜೆಪಿಯಲ್ಲಿರುವುದು ಅರ್ಧ ಭ್ರಷ್ಟರು, ಇನ್ನರ್ಧ ಪುಕ್ಕಲುಗಳು! ಅಹಂಕಾರ, ಭ್ರಷ್ಟಾಚಾರಗಳನ್ನು ಮೈಗೂಡಿಸಿಕೊಂಡಿರುವ ಈ ಸರ್ಕಾರದ ಸಚಿವರುಗಳಿಗೆ ತಮ್ಮದೇ ಪ್ರಣಾಳಿಕೆಯ ಭರವಸೆಗಳ ಬಗೆಗಿನ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯವಿಲ್ಲ. ಬಿಜೆಪಿ ಪಕ್ಷದಲ್ಲಿರುವವರೆಲ್ಲ ಸುಳ್ಳಿನ ಸಾಮ್ರಾಜ್ಯದ ಸಾಮ್ರಾಟರು!
#PayCM ಈಗ SayCM ಆಗಲಿ, ರಾಜ್ಯದ ಜನತೆಗೆ ಉತ್ತರ ನೀಡಲಿ. ಚುನಾವಣೆಗೂ ಮೊದಲು ನೀಡಿದ ಭರವಸೆಗಳನ್ನು ಮರೆತು ವಚನಭ್ರಷ್ಟರಾದ ಬಿಜೆಪಿ ರಾಜ್ಯದ ಜನತೆಗೆ ಉತ್ತರ ನೀಡಬೇಕಿದೆ. ತಮ್ಮದೇ ಪಕ್ಷದ ಪ್ರಣಾಳಿಕೆಯ ಭರವಸೆಗಳ ಬಗ್ಗೆ ಮಾತಾಡಲು ಕೂಡ 40% ಕಮಿಷನ್ ನೀಡಬೇಕೆ ಬಸವರಾಜ ಬೊಮ್ಮಾಯಿ ಅವರೇ?
ತಮ್ಮದೇ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸುವ ದಮ್ಮು ತಾಕತ್ತು ಇದೆಯೇ ಬಿಜೆಪಿಗೆ?
ಎಷ್ಟು ಭರವಸೆಗಳನ್ನು ಈಡೇರಿಸಿದ್ದೇವೆ, ಈಡೇರಿಸಿಲ್ಲ ಎಂಬ ಲೆಕ್ಕ ಕೊಡಲು ಸಾಧ್ಯವೇ ರಾಜ್ಯದ ಜನತೆಗೆ?
ಪ್ರಣಾಳಿಕೆ ಮುಂದಿಟ್ಟುಕೊಂಡು
ದಮ್ಮು ತಾಕತ್ತಿನ ಪ್ರದರ್ಶನ ಮಾಡಲು ಸಾಧ್ಯವೇ @BJP4Karnataka?#NimHatraIdyaUttara pic.twitter.com/1arvtIR8Ad— Karnataka Congress (@INCKarnataka) October 18, 2022
ತಮ್ಮದೇ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸುವ ದಮ್ಮು ತಾಕತ್ತು ಇದೆಯೇ ಬಿಜೆಪಿಗೆ? ಎಷ್ಟು ಭರವಸೆಗಳನ್ನು ಈಡೇರಿಸಿದ್ದೇವೆ, ಈಡೇರಿಸಿಲ್ಲ ಎಂಬ ಲೆಕ್ಕ ಕೊಡಲು ಸಾಧ್ಯವೇ ರಾಜ್ಯದ ಜನತೆಗೆ? ಪ್ರಣಾಳಿಕೆ ಮುಂದಿಟ್ಟುಕೊಂಡು ದಮ್ಮು ತಾಕತ್ತಿನ ಪ್ರದರ್ಶನ ಮಾಡಲು ಸಾಧ್ಯವೇ ಬಿಜೆಪಿ ಎಂದು ಪ್ರಶ್ನಿಸಿದೆ.
ಅಲ್ಲದೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 550 ಭರವಸೆಗಳನ್ನು ನೀಡಿತ್ತು, ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 ಪ್ರಶ್ನೆಗಳನ್ನು ಕೇಳಿದ್ದೇವೆ, ಬಿಜೆಪಿ ನೀಡಿದ ಉತ್ತರ – 0. ತಮ್ಮದೇ ಪ್ರಣಾಳಿಕೆಯಲ್ಲಿನ ಅಂಶಗಳ ಬಗ್ಗೆ ಬಿಜೆಪಿಗೆ ಮಾತನಾಡುವ ಧೈರ್ಯವಿರದಿರುವುದು ಸರ್ಕಾರದ ವಿಫಲತೆಗೆ ನಿದರ್ಶನ.

ಮ್ಯಾನೇಜ್ಮೆಂಟ್ ಸರ್ಕಾರ, ಬ್ಲಾಕ್ಮೇಲ್ ಸರ್ಕಾರ, 40% ಕಮಿಷನ್ ಸರ್ಕಾರ, ತಳ್ಳುವ ಸರ್ಕಾರ, ಸಿಡಿ ಸರ್ಕಾರ. ಇವೆಲ್ಲವೂ ಬಿಜೆಪಿಯವರೇ ತಮ್ಮ ಸರ್ಕಾರಕ್ಕೆ ನೀಡಿದ ಬಿರುದುಗಳು! ವಚನಭ್ರಷ್ಟತೆಯ ಬಗ್ಗೆ, ವೈಫಲ್ಯದ ಸತ್ಯದ ಬಗ್ಗೆ, ಭ್ರಷ್ಟಾಚಾರದ ಬಗ್ಗೆ ಮಾತನಾಡಲೂ ಸಹ ಕಮಿಷನ್ ನೀಡಬೇಕೇ ಬಿಜೆಪಿ ಎಂದು ಕಾಂಗ್ರೆಸ್ ಕುಟುಕಿದೆ.