ಕಾಂಗ್ರೆಸ್ ಮಹತ್ವದ ಹೆಜ್ಜೆ : ಕ್ರಿಮಿನಲ್ ಹಿನ್ನೆಲೆಯುಳ್ಳ ಯುವ ಪದಾಧಿಕಾರಿಗಳಿಗೆ ಶಾಕ್
ಬೆಂಗಳೂರು : ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷ ಚುನಾವಣೆಯಲ್ಲಿ ಗೆದ್ದಿದ್ದ ಮೊಹಮ್ಮದ್ ನಲಪಾಡ್ ಅವರನ್ನ ಅನರ್ಹಗೊಳಿಸಿದ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಕ್ರಿಮಿನಲ್ ಹಿನ್ನೆಲೆಯುಳ್ಳ ಯುವ ಪದಾಧಿಕಾರಿಗಳನ್ನು ಅನರ್ಹಗೊಳಿಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ.
ಚುನಾವಣೆಯಲ್ಲಿ ಮೊಹಮ್ಮದ್ ನಲಪಾಡ್ ಅತೀ ಹೆಚ್ಚು ಮತಗಳನ್ನು ನಡೆದರೂ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅವರ ಬದಲಾಗಿ ರಕ್ಷರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಯಿತು.
ಇದು ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದ್ರೆ ಕೆಲವರು ಮತ್ತೆ ನಲಪಾಡ್ ಅವರನ್ನೇ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ವದಂತಿಗಳನ್ನ ಹಬ್ಬಿಸಿದ್ದರು.
ಇದಕ್ಕೆ ಪಕ್ಷ ಸ್ಪಷ್ಟನೆ ನೀಡಿದ್ದು, ಯುವ ಕಾಂಗ್ರೆಸ್ ನ ಬ್ಲಾಕ್ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಅಧ್ಯಕ್ಷರ ಆಯ್ಕೆಗಾಗಿ ಫೌಂಡೇಷನ್ ಫಾರ್ ಅಡ್ವಾನ್ಸಡ್ ಮ್ಯಾನೇಜ್ಮೆಂಟ್ ಆಫ್ ಎಲೆಕ್ಷನ್ ಸಂಸ್ಥೆ ಆಂತರಿಕ ಚುನಾವಣಾ ಆಯೋಗವಾಗಿ ಕೆಲಸ ಮಾಡಿದೆ.
ಈ ಸಂಸ್ಥೆಗೆ ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಲಿಂಗ್ಡೋ ಅಧ್ಯಕ್ಷರಾಗಿದ್ದು, ಯಾವುದೇ ಸಂದರ್ಭದಲ್ಲೂ ಫಲಿತಾಂಶ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದಿದೆ.
ಅಲ್ಲದೇ ನಲ್ಲಪಾಡ್ ಮೇಲೆ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ದೋಷಾರೋಪಣ ಪಟ್ಟಿ ಕೂಡ ಸಲ್ಲಿಕೆಯಾಗಿದೆ.
ಹೀಗಾಗಿ ಅವರಿಗೆ ಅಧ್ಯಕ್ಷ ಪಟ್ಟ ಕಟ್ಟುವುದು ಯುವ ಕಾಂಗ್ರೆಸ್ ನ ಚುನಾವಣೆಯ ಮಾರ್ಗಸೂಚಿಗೆ ವಿರುದ್ಧವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕ್ರಿಮಿನಲ್ ಹಿನ್ನೆಲೆ ಕಾರಣ ನಲಪಾಡ್ ರನ್ನ ಅನರ್ಹಗೊಳಿಸಿದಂತೆ ಉತ್ತರ ಕನ್ನಡ ಜಿಲ್ಲೆ ಮತ್ತು ಹುಬ್ಬಳ್ಳಿ ಧಾರಾವಾಡ ಸೇರಿದಂತೆ ಹಲವಾರು ಭಾಗಗಳಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳ ಸ್ಪರ್ಧೆಯನ್ನು ಅನರ್ಹಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









