ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಮಹಿಳೆಯರಿಗೆ ಬೆಲೆಯೇ ಇಲ್ಲ
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಮಹಿಳೆಯರಿಗೆ ಬೆಲೆಯೇ ಇಲ್ಲ. ಇವರಿಗೆ ಮಹಿಳೆಯರು ನೆನಪಾಗುವುದು, ಚುನಾವಣೆಯ ಸಂದರ್ಭದಲ್ಲಿ ಅಥವಾ ಪ್ರತಿಭಟನೆ ಮಾಡುವಾಗ ಮಾತ್ರ. ಕಾರ್ಯಾಧ್ಯಕ್ಷರಲ್ಲೂ ಮಹಿಳೆಯರಿಗೆ ಸ್ಥಾನವಿಲ್ಲ, ಪರಿಷತ್ ಚುನಾವಣೆಗೂ ಮಹಿಳಾ ಅಭ್ಯರ್ಥಿ ಇಲ್ಲ. ಮಹಿಳಾ ಸಬಲೀಕರಣ ಬರೇ ಬೂಟಾಟಿಕೆಯೇ ಎಂದು ರಾಜ್ಯ ಬಿಜೆಪಿ ಘಟಕ ಕುಟುಕಿದೆ.
ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಮಹಿಳೆಯರಿಗೆ ಬೆಲೆಯೇ ಇಲ್ಲ. ಇವರಿಗೆ ಮಹಿಳೆಯರು ನೆನಪಾಗುವುದು, ಚುನಾವಣೆಯ ಸಂದರ್ಭದಲ್ಲಿ ಅಥವಾ ಪ್ರತಿಭಟನೆ ಮಾಡುವಾಗ ಮಾತ್ರ.
ಕಾರ್ಯಾಧ್ಯಕ್ಷರಲ್ಲೂ ಮಹಿಳೆಯರಿಗೆ ಸ್ಥಾನವಿಲ್ಲ, ಪರಿಷತ್ ಚುನಾವಣೆಗೂ ಮಹಿಳಾ ಅಭ್ಯರ್ಥಿ ಇಲ್ಲ.
ಮಹಿಳಾ ಸಬಲೀಕರಣ ಬರೇ ಬೂಟಾಟಿಕೆಯೇ?#CONgressAgainstWomenEmpowerment
— BJP Karnataka (@BJP4Karnataka) May 25, 2022
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿರುವ ಬಿಜೆಪಿ, ಉತ್ತರಪ್ರದೇಶ – ಮೈ ಲಡ್ಕಿ ಹೂ, ಮೈ ಲಡ್ ಸಕ್ತಿ ಹೂ. ಕರ್ನಾಟಕ – ನಾ ನಾಯಕಿ. ಮಹಿಳಾ ಸಬಲೀಕರಣ ಬಗ್ಗೆ ಉದ್ದುದ್ದ ಭಾಷಣ ಮಾಡುವ ಕಾಂಗ್ರೆಸ್ ನಾಯಕರು ಒಬ್ಬ ಮಹಿಳಾ ಅಭ್ಯರ್ಥಿಯನ್ನೂ ಪರಿಷತ್ತಿಗೆ ಆಯ್ಕೆ ಮಾಡಿಲ್ಲ. ಮಹಿಳಾ ಸಬಲೀಕರಣ ಬರೇ ಭಾಷಣಕ್ಕೆ ಸೀಮಿತವೇ?
ಧೈರ್ಯಕ್ಕೆ ದುರ್ಗೆ, ಶಕ್ತಿಗೆ ಪಾರ್ವತಿ, ಸಹನೆಗೆ ಸೀತೆ, ವಿದ್ಯೆಗೆ ಸರಸ್ವತಿ,ಎಂದು ಸ್ತ್ರೀಯರಿಗೆ ಗೌರವ ಕೊಡುವ ಸಂಸ್ಕೃತಿ ನಮ್ಮದು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಬೆಳಗಾವಿಯ ‘ಲಕ್ಷ್ಮಿ’ಗೆ ಮಾತ್ರ ಗೌರವ. ಇದು ಮಹಿಳಾ ಸಬಲೀಕರಣ ವಿಚಾರಕ್ಕೆ ಕಾಂಗ್ರೆಸ್ ಮಾಡುತ್ತಿರುವ ಅವಮಾನವಲ್ಲದೆ ಮತ್ತೇನು?
ಧೈರ್ಯಕ್ಕೆ ದುರ್ಗೆ, ಶಕ್ತಿಗೆ ಪಾರ್ವತಿ
ಸಹನೆಗೆ ಸೀತೆ, ವಿದ್ಯೆಗೆ ಸರಸ್ವತಿ,
ಎಂದು ಸ್ತ್ರೀಯರಿಗೆ ಗೌರವ ಕೊಡುವ ಸಂಸ್ಕೃತಿ ನಮ್ಮದು.ಆದರೆ ಕಾಂಗ್ರೆಸ್ ಪಕ್ಷದಲ್ಲಿ ಬೆಳಗಾವಿಯ 'ಲಕ್ಷ್ಮಿ'ಗೆ ಮಾತ್ರ ಗೌರವ.
ಇದು ಮಹಿಳಾ ಸಬಲೀಕರಣ ವಿಚಾರಕ್ಕೆ ಕಾಂಗ್ರೆಸ್ ಮಾಡುತ್ತಿರುವ ಅವಮಾನವಲ್ಲದೆ ಮತ್ತೇನು?#CONgressAgainstWomenEmpowerment
— BJP Karnataka (@BJP4Karnataka) May 25, 2022
ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಜಿಲ್ಲೆಯಲ್ಲಿ ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದ ಹೇಮಲತಾ ನಾಯಕ್ ಅವರನ್ನು ಬಿಜೆಪಿ ಗುರುತಿಸಿದೆ. ತಳಮಟ್ಟದ ಕಾರ್ಯಕರ್ತರನ್ನು ನಮ್ಮ ಪಕ್ಷ ಮುಂಚೂಣಿಯಲ್ಲಿ ನಿಲ್ಲಿಸಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವುದು ನಮಗೆ ಕೇವಲ ಬಾಯಿಮಾತಿನ ಘೋಷಣೆಯಲ್ಲ ಎಂದು ಬರೆದುಕೊಂಡಿದೆ.