Congress vs BJP | ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಬಿಜೆಪಿ ವ್ಯಂಗ್ಯ
ಬೆಂಗಳೂರು : ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ ಕಿಡಿಕಾರಿದೆ.
ಬಿಜೆಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ..
ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಮುಡಂಬಡಿತ್ತಾಯ ಸಮಿತಿ ಪಠ್ಯದಲ್ಲಿ ಸೇರಿಸಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಈ ಪಠ್ಯವನ್ನು ಕಿತ್ತು ಹಾಕಿತ್ತು. ಇದನ್ನು ಸಮರ್ಥಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೇ?.
ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಮುಡಂಬಡಿತ್ತಾಯ ಸಮಿತಿ ಪಠ್ಯದಲ್ಲಿ ಸೇರಿಸಿತ್ತು.
ಆದರೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಈ ಪಠ್ಯವನ್ನು ಕಿತ್ತು ಹಾಕಿತ್ತು.
ಇದನ್ನು ಸಮರ್ಥಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೇ?#ಉತ್ತರಿಸಿಕಾಂಗ್ರೆಸ್
— BJP Karnataka (@BJP4Karnataka) June 9, 2022
ಭಾರತದ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದ ಸಿಡಿಲ ಸಂತ ಸ್ವಾಮಿ ವಿವೇಕಾನಂದ ಅವರ ಪಠ್ಯವನ್ನು ಮಕ್ಕಳಿಗೆ ಪ್ರೇರಣೆಯಾಗಲೆಂದು ಸೇರಿಸಲಾಗಿತ್ತು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅದಕ್ಕೂ ಕತ್ತರಿ ಹಾಕಲಾಯಿತು. ವಿವೇಕಾನಂದರ ಪಠ್ಯ ಬೇಡವೇ ಬೇಡ ಎಂದು ಕಾಂಗ್ರೆಸ್ ಪ್ರತಿಭಟಿಸುತ್ತಿದೆಯೇ?
ನಾಡ ಕಟ್ಟುವಲ್ಲಿ ಮೈಸೂರು ಮಹಾರಾಜರ ಪಾತ್ರ ಅತ್ಯಂತ ಸ್ಮರಣೀಯ.
ಕಾಂಗ್ರೆಸ್ಸಿಗರೇ, ಕರುನಾಡಿಗೆ ಭದ್ರಬುನಾದಿ ಹಾಕಿಕೊಟ್ಟ ಒಡೆಯರ ವಂಶಸ್ಥರನ್ನು ಪಠ್ಯದಲ್ಲಿ ಅಳವಡಿಸಿರುವುದರನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದೀರಾ?#ಉತ್ತರಿಸಿಕಾಂಗ್ರೆಸ್
— BJP Karnataka (@BJP4Karnataka) June 9, 2022
ನಾಡ ಕಟ್ಟುವಲ್ಲಿ ಮೈಸೂರು ಮಹಾರಾಜರ ಪಾತ್ರ ಅತ್ಯಂತ ಸ್ಮರಣೀಯ. ಕಾಂಗ್ರೆಸ್ಸಿಗರೇ, ಕರುನಾಡಿಗೆ ಭದ್ರಬುನಾದಿ ಹಾಕಿಕೊಟ್ಟ ಒಡೆಯರ ವಂಶಸ್ಥರನ್ನು ಪಠ್ಯದಲ್ಲಿ ಅಳವಡಿಸಿರುವುದರನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದೀರಾ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.