“ಟಿಪ್ಪು ನಿಜ ಕನಸುಗಳು” ಪುಸ್ತಕ ಮಾರಟಕ್ಕೆ ಕೋರ್ಟ್ ತಡೆಯಾಜ್ಞೆ…
ಟಿಪ್ಪು ಸುಲ್ತನ್ ಕುರಿತು ಬರೆಯಲಾಗಿದ್ದ ”ಟಿಪ್ಪು ನಿಜ ಕನಸುಗಳು “ ಪುಸ್ತಕ ಮಾರಟ ಮತ್ತು ವಿತರಣೆಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಈ ಪುಸ್ತಕವನ್ನ ರಚಿಸಿದ್ದರು.
ಜಿಲ್ಲಾ ವಕ್ಫ್ ಬೋರ್ಡ್ ಸಮಿತಿಯ ಮಾಜಿ ಅಧ್ಯಕ್ಷ ಬಿ.ಎಸ್.ರಫೀವುಲ್ಲಾ ಅವರ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ಈ ತೀರ್ಪು ನೀಡಿದೆ.
ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ತಪ್ಪು ಮಾಹಿತಿ ಇದೆ ಎಂದು ಆರೋಪಿಸಿ ಅದರ ಮಾರಾಟವನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
‘ಟಿಪ್ಪು ನಿಜ ಕನಸುಗಳು’ ಪುಸ್ತಕವನ್ನು ಅದರ ಲೇಖಕ ಹಾಗೂ ಪ್ರಕಾಶಕ ಅಯೋಧ್ಯಾ ಪ್ರಕಾಶನ ಹಾಗೂ ಮುದ್ರಕ ರಾಷ್ಟ್ರೋತ್ಥಾನ ಮುದ್ರಾಾಲಯಕ್ಕೆ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಆದರೇ ಟಿಪ್ಪು ನಾಟಕ ಪ್ರದರ್ಶನಕ್ಕೆ ಯಾವುದೇ ಅಡ್ಡಿ ಇಲ್ಲ. ನಾಟಕ ಪ್ರದರ್ಶನಕ್ಕೆ ತಡೆ ನೀಡಲಾಗುವುದಿಲ್ಲ ಎಂದು ಕೋರ್ಟ್ ಹೇಳಿದೆ.
Karnataka Court Stays Distribution Sale Of Tipu Sultan Book Tipu Nija Kanasugalu