ಇತ್ತೀಚೆಗೆ ದೇಶ , ರಾಜ್ಯದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ.. ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ 100 ಆರೋಪ ಪಟ್ಟಿಗಳನ್ನ ಸಲ್ಲಿಸಲಾಗಿದೆ… ಆದ್ರೆ ಅಷ್ಟೂ ಪ್ರಕರಣಗಳ ಪೈಕಿ ಶಿಕ್ಷೆಯಾಗಿರೋದೇ ಕೇವಲ ಮೂರೇ ಮೂರು ಪ್ರಕರಣಗಳಿಗೆ ಮಾತ್ರ..
ಲೋಕಸಭೆಯಲ್ಲಿ ಸದಸ್ಯ ಡ್ಯಾನಿಷ್ ಅಲಿ ಕೇಳಿರುವ ಪ್ರಶ್ನೆಗೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಲಿಖಿತ ಉತ್ತರ ನೀಡಿದ್ದಾರೆ. ದೇಶದಲ್ಲಿನ ಅಪರಾಧ ಪ್ರಕರಣಗಳ ಬಗ್ಗೆ 2020ರ ವರೆಗೆ ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯುರೊ ಸಿದ್ಧಪಡಿಸಿದ್ದು, ಅದರ ಆಧಾರದಲ್ಲಿ ಈ ವಿವರ ನೀಡಲಾಗಿದೆ ಎಂದು ಉತ್ತರಿಸಿದ್ದಾರೆ.
2018ರಲ್ಲಿ 29 ಪ್ರಕರಣಗಳು ದಾಖಲಾಗಿ 224 ಮಂದಿಯನ್ನು ಬಂಧಿಸಲಾಗಿತ್ತು. 62 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಎರಡು ಪ್ರಕರಣಗಳಲ್ಲಿ 9 ಅಪರಾಧಿಗಳಿಗೆ ಶಿಕ್ಷೆ ಆಗಿದೆ. 2019ರಲ್ಲಿ 11 ಪ್ರಕರಣಗಳಲ್ಲಿ FIR ದಾಖಲಾಗಿ, 77 ಮಂದಿಯನ್ನು ಬಂಧಿಸಲಾಗಿತ್ತು.
22 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಒಂದು ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಶಿಕ್ಷೆ ನೀಡಲಾಗಿದೆ ಎಂದು ಅವರು ಉತ್ತರದಲ್ಲಿ ತಿಳಿಸಿದ್ದಾರೆ.








