Karntaka Election 2023 : ಕುಟುಂಬ ರಾಜಕಾರಣಕ್ಕೆ ಕೈ ಒಲವು; ಅಪ್ಪ ಮಗ – ತಂದೆ ಮಗಳಿಗೆ ಟಿಕೆಟ್…
ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಅಂಗವಾಗಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ. ಮೊದಲ ಪಟ್ಟಿಯಲ್ಲಿ ನಿರೀಕ್ಷೆಯಂತೆ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.
ಕಾಂಗ್ರಸ್ ಪಕ್ಷದಲ್ಲೂ ಕುಟುಂಬ ರಾಜಕಾರಣಕ್ಕೆ ಒತ್ತು ನೀಡಲಾಗಿದ್ದು, ಒಂದೆ ಕುಟುಂಬದ ಇಬ್ಬರಿಗೆ ಅಥವಾ ಕುಟುಂಬದ ಇತರರಿಗೆ ಈ ಭಾರಿ ಟಿಕೆಟ್ ನೀಡಲಾಗಿದೆ. ಬಿಟಿಎಂ ಲೇಔಟ್ ನಿಂದ ರಾಮಲಿಂಗಾ ರೆಡ್ಡಿ ಕಣಕ್ಕಿಳಿಯಲಿದ್ದು, ಅವರ ಪುತ್ರಿ ಸೌಮ್ಯಾ ರೆಡ್ಡಿ ಜಯನಗರದಿಂದ ಕಣಕ್ಕಿಳಿಯಲಿದ್ದಾರೆ. ದಾವಣಗೆರೆ ದಕ್ಷಿಣದಿಂದ ಶಾಮನೂರ ಶಿವಶಂಕರಪ್ಪ ಹಾಗೂ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬೆಂಗಳೂರಿನ ವಿಜಯನಗರದಿಂದ ಎಂ.ಕೃಷ್ಣಪ್ಪ , ಅವರ ಪುತ್ರ ಪ್ರಿಯಾ ಕೃಷ್ಣಗೆ ಗೋವಿಂದರಾಜನಗರ ಟಿಕೆಟ್ ಘೋಷಿಸಲಾಗಿದೆ. ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ದೇವನಹಳ್ಳಿ ಕ್ಷೇತ್ರದಿಂದ ಹಾಗೂ ಅವರ ಪುತ್ರಿ ರೂಪಾ ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಅದೃಷ್ಯ ಪರೀಕ್ಷೆಗಿಳಿಯಲಿದ್ದಾರೆ.
ಇಷ್ಟೆ ಅಲ್ಲದೇ ಇತ್ತೀಚೆಗಷಷ್ಟೆ ನಿಧನರಾದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರ ಪುತ್ರ ದರ್ಶನ್ ಅವರನ್ನ ನಂಜನಗೂಡಿನಲ್ಲಿ ಕಣಕ್ಕೆ ಇಳಿಸಲಾಗಿದೆ. ಇನ್ನೂ ದಿವಂಗತ ಮಹಾದೇವ ಪ್ರಸಾದ್ ಪುತ್ರ ಗಣೇಶ್ ಪ್ರಸಾದ್ ಅವರಿಗೂ ಟಿಕೆಟ್ ನೀಡಲಾಗಿದೆ. ಬೆಳ್ತಂಗಡಿಯಲ್ಲಿ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸಹೋದರ ಬಿ.ಕೆ.ಶಿವರಾಮ್ ಪುತ್ರ ರಕ್ಷಿತ್ ಶಿವರಾಮ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.
ಆದರೇ ಈ ಪಟ್ಟಿಯಲ್ಲಿ ಹಾಲಿ ಶಾಸಕರಾದ ಪುಲಕೇಶಿನಗರದ ಅಖಂಡ ಶ್ರೀನಿವಾಸಮೂರ್ತಿ, ಹರಿಹರ ಎಂ. ರಾಮಪ್ಪ, ಕುಂದಗೋಳ ಕುಸುಮಾ ಶಿವಳ್ಳಿ, ಲಿಂಗಸುಗೂರು ಡಿ.ಎಸ್.ಹೂಲಗೇರಿ, ಅಫಜಲಪುರ ಎಂ.ವೈ.ಪಾಟೀಲ, ಶಿಡ್ಲಘಟ್ಟ ವಿ.ಮುನಿಯಪ್ಪ ಕ್ಷೇತ್ರಗಳಿಗೆ ಅಭ್ಯರ್ಥಿಯ ಹೆಸರನ್ನ ಘೋಷಿಸಿದೇ ಕುತೂಹಲ ಕಾಯ್ದುಕೊಳ್ಳಲಾಗಿದೆ.
Karnataka Election 2023 : Favoring family politics; Father son – father daughter get ticket…