Karnataka Election 2023 : ಕಾಂಗ್ರೆಸ್ ನ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಬಿಡುಗಡೆ – D K ಶಿವಕುಮಾರ್…
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಯಗಾದಿ ಹಬ್ಬದಂದು ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಟಿಕೆಟ್ ಘೋಷಣೆಗೂ ಮುನ್ನ ಮಂಡ್ಯದ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ಮಂಗಳವಾರ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ನಾಳೆ ಅಂದರೆ ಯುಗಾದಿ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಚುನಾವಣೆಗೆ ನಿಲ್ಲುವ ಕ್ಷೇತ್ರದ ಕುರಿತಂತೆ ಮಾತನಾಡಿ “ಸಿದ್ದರಾಮಯ್ಯ ಅವರು ಬಯಸಿದ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶವಿದೆ. ಯಾವುದಾದರೂ ಕ್ಷೇತ್ರವನ್ನು ಆಯ್ಕೆ ಮಾಡಲಿ. ಅವರ ಅನುಕೂಲ ನೋಡಿಕೊಂಡು ತೀರ್ಮಾನ ಮಾಡಲಿ. ಎಲ್ಲಿ ತೀರ್ಮಾನ ಮಾಡ್ತಾರೋ ಅಲ್ಲೇ ಅವಕಾಶ ಕೊಡ್ತೀವಿ ಎಂದು ಹೇಳಿದ್ದಾರೆ.
Karnataka Election 2023: First list of more than 100 Congress candidates to be released tomorrow – D K Shivakumar…