Karnataka Election 2023 | ಹೌದು, ಕಾಂಗ್ರೆಸ್ ನಲ್ಲಿ ಎರಡು ದಿಕ್ಕು ಅಂತಾ ಒಪ್ಪಿಕೊಂಡ ಹರಿಪ್ರಸಾದ್
ಬೆಂಗಳೂರು : ಕಾಂಗ್ರೆಸ್ ನಲ್ಲಿ ಎರಡು ಬಣಗಳಿವೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಅನ್ನೋದು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿರುವ ಮಾತು.
ಇದೇ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಆಗಾಗ್ಗೆ ಟೀಕೆ ಮಾಡುತ್ತಿರುತ್ತಾರೆ.
ಅದರಂತೆ ಇದೀಗ ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಒಂದು ದಿಕ್ಕು ಸಿದ್ದರಾಮಯ್ಯ ಇನ್ನೊಂದು ದಿಕ್ಕು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಇದಕ್ಕೆ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದು, ಹೌದು, ಕಾಂಗ್ರೆಸ್ ಪಕ್ಷದಲ್ಲಿ ಎರಡು ದಿಕ್ಕು ಇದೆ ಎಂದು ಒಪ್ಪಿಕೊಳ್ಳೋಣ. ಆದರೆ ಬಿಜೆಪಿ ಪಕ್ಷದಲ್ಲಿ ಎಷ್ಟು ದಿಕ್ಕಿಗಳಿವೆ ಎಂದು ಪ್ರಶ್ನಿಸಿದ್ದಾರೆ.
ಸದ್ಯ ಬಿಜೆಪಿಯವರು ದಿಕ್ಕುಪಾಲಾಗಿದ್ದಾರೆ. ಬಿಜೆಪಿಯ ಒಬ್ಬೊಬ್ಬ ನಾಯಕ ಒಂದೊಂದು ದಿಕ್ಕಿನಲ್ಲಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಇನ್ನು ಭಾರತ್ ಜೋಡೋ ಯಾತ್ರೆಯ ಸಫಲತೆಯ ಶ್ರೇಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದು ಹರಿಪ್ರಸಾದ್ ಹೇಳಿದ್ದಾರೆ.








