Karnataka election 2023 – ಕೋಲಾರದಿಂದ ಸಿದ್ದು – ಹೆಚ್ಡಿಕೆ ಸ್ಪರ್ಧೆ ?
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ಪ್ರಮುಖ ನಾಯಕರು ಕ್ಷೇತ್ರ ಹುಡುಕಾಟದಲ್ಲಿ ತೊಡಗಿಕೊಂಡಿದ್ದಾರೆ.
ಅದರಲ್ಲೂ ಮುಖ್ಯವಾಗಿ ಸಿಎಂ ಕನಸು ಕಾಣುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಕ್ ವಾಕ್ ಕ್ಷೇತ್ರಕ್ಕಾಗಿ ಭಾರಿ ಸರ್ಚ್ ಮಾಡುತ್ತಿದ್ದಾರೆ.
ಅದೇ ಕಾರಣಕ್ಕಾಗಿ ಯಾವ ಕ್ಷೇತ್ರದಿಂದ ಸ್ಪರ್ಧಿಸಿದ್ರೆ ಸುಲಭವಾಗಿ ಗೆಲುವು ಸಾಧಿಸಬಹುದು ಎಂದು ತಮ್ಮ ಆಪ್ತರ ಬಳಿ ಚರ್ಚೆ ನಡೆಸುತ್ತಿದ್ದಾರೆ.
ಈ ನಡುವೆ ಅವರು ಕೋಲಾರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.
ಇತ್ತೀಚೆಗಷ್ಟೆ ಕೋಲಾರ ಜಿಲ್ಲಾ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಕೋಲಾರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಿಕೊಂಡಿದ್ದರು.
ಇದಕ್ಕೆ ಸ್ಪಂದಿಸಿದ್ದ ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು.

ಇತ್ತ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಅವಕಾಶಗಳಿರುವ ಕಾರಣ ಜೆಡಿಎಸ್ ನಿಂದ ಮಾಸ್ಟರ್ ಪ್ಲಾನ್ ರೆಡಿಯಾಗಿದೆ.
ಸದ್ಯ ಕೋಲಾರದಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಇದ್ದು, ಅವರು ಪಕ್ಷದಿಂದ ಎರಡೂ ಕಾಲುಗಳನ್ನು ಹೊರಗಡೆ ಇಟ್ಟಿದ್ದಾರೆ.
ಹೀಗಾಗಿ ಜಿಲ್ಲಾ ಜೆಡಿಎಸ್ ನಾಯಕರು ಹೆಚ್ ಡಿ ಕುಮಾರಸ್ವಾಮಿ ಅವರನ್ನ ಕೋಲಾರಕ್ಕೆ ಕರೆತರಲು ಮುಂದಾಗಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂದು ಜೆಡಿಎಸ್ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.
ಆದ್ರೆ ಇದಕ್ಕೆ ಕುಮಾರಸ್ವಾಮಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಅಂತಾ ತಿಳಿದುಬಂದಿದೆ. ಬದಲಾಗಿ ಕುಮಾರಸ್ವಾಮಿ ರಾಮನಗರದಿಂದಲೇ ಸ್ಪರ್ಧೆ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ಒಂದು ವೇಳೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದೇ ಖಚಿತವಾದರೇ ಜೆಡಿಎಸ್ ಯಾವ ರೀತಿಯ ರಣತಂತ್ರಗಳನ್ನು ರೂಪಿಸುತ್ತದೆ ಎಂಬೋದು ಸದ್ಯದ ಕುತೂಹಲವಾಗಿದೆ.